ಬಂಟ್ವಾಳ:(ನ.10) ಪ್ರಿಯತಮೆಯನ್ನು ಭೇಟಿಯಾಗಲು ನಡುರಾತ್ರಿ ಬಂದ ಯುವಕನನ್ನು ಯುವತಿಯ ಸಂಬಂಧಿಕರು ಮತ್ತು ಸ್ಥಳೀಯರು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಇದನ್ನೂ ಓದಿ: ⭕ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಪತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ!!!
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಜಿಪ ಕಂಚಿನಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು ಸದ್ಯ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಕುರಿತು ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.