ಕಿಲ್ಲೂರು:(ನ.10) ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಗ್ರಾಮೀಣ ಆಟಗಳ ಬಗ್ಗೆ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ⭕ಶಿವಮೊಗ್ಗ: ಜೀವಕ್ಕೆ ಕುತ್ತು ತಂದ ಫೋನ್!!
ಸಂಪನ್ಮೂಲ ವ್ಯಕ್ತಿಯಾದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಮಹಾವೀರ ಜೈನ್ ಅವರು ವಿವಿಧ ಗ್ರಾಮೀಣ ಆಟಗಳನ್ನು ಆಡಿಸುವುದರ ಮೂಲಕ ಗ್ರಾಮೀಣ ಕ್ರೀಡೆಗಳ ಬಗ್ಗೆ ಒಂದಷ್ಟು ಮಹತ್ವದ ಮಾಹಿತಿ ನೀಡಿ ಹಿಂದಿನ ಆಟಗಳ ಬಗ್ಗೆ ನೆನಪು ಮಾಡಿದರು.
ಮಂಗಳೂರು ನೆಹರು ಕೇಂದ್ರದ ಸಂಯೋಜಕ ತೀಕ್ಷಿತ್ ಕಲ್ಬೆಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ಶಿಬಿರ ಸಮಿತಿಯ ಅಧ್ಯಕ್ಷರಾದ ಮೋಹನ್ ಕಿಲ್ಲೂರು ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಶಾಲೆಯ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ , ಮುಂಡಾಜೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ ಪೂಜಾರಿ , ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಗಿರೀಶ್ ಗೌಡ ಜಾರಿಗೆ ಇವರು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.