Wed. Nov 20th, 2024

Bagalkot: ಮದುವೆಯಾಗಲು ನಿರಾಕರಿಸಿದ್ದಕ್ಕೆ 19 ರ ಯುವತಿ ಆತ್ಮಹತ್ಯೆ

ಬಾಗಲಕೋಟೆ:(ನ.12) ಪ್ರೇಮಿಯೊಬ್ಬ ಪ್ರಿಯತಮೆಯನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಮನೆಯವರು ಆರೋಪಿಸಿರುವ ಘಟನೆ ಬೀಳಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ⭕ಬೆಂಗಳೂರು: ನಮಾಝ್ ಮಾಡಲು, ಬೀಫ್ ತಿನ್ನಲು ಒತ್ತಾಯಿಸುತ್ತಿದ್ದರು..!


ರುಕ್ಕವ್ವ (19) ವಡವಾಣಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಅ.02 ರಂದು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು. ಯುವತಿಯ ತಂದೆ ರುದ್ರಪ್ಪ ನನ್ನ ಮಗಳ ಸಾವಿಗೆ ಪ್ರೀತಿಸಿ ಕೈಕೊಟ್ಟ ಶಂಕ್ರಪ್ಪ ಪತ್ತಾರ ಕಾರಣ ಎಂದು ಆರೋಪಿಸಿ ಬೀಳಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಆದರೆ ಇಲ್ಲಿಯವರೆಗೆ ಬೀಳಗಿ ಪೊಲೀಸರು ಆತನನ್ನು ಬಂಧಿಸಿಲ್ಲ ಎಂದು ಆರೋಪಿಸಿ ಯುವತಿಯ ತಂದೆ ಸೋಮವಾರ ಬಾಗಲಕೋಟೆ ಎಸ್‌ಪಿ ಕಚೇರಿಯ ಮೆಟ್ಟಿಲೇರಿದ್ದಾರೆ.


ಸುಮಾರು ವರ್ಷಗಳಿಂದ ಯುವಕ ಶಂಕ್ರಪ್ಪ ಪತ್ತಾರ ನನ್ನ ಮಗಳನ್ನು ಪ್ರೀತಿಸುತ್ತಿದ್ದ. ಆದರೆ ಮದುವೆ ಆಗಲು ನಿರಾಕರಿಸಿದ್ದ. ನನ್ನ ಮಗಳ ಸಾವಿಗೆ ಶಂಕ್ರಪ್ಪ ಮಾಡಿದ ನಿರಾಕರಣೆಯೇ ಕಾರಣ ಎಂದು ಪ್ರಿಯಕರ ಮಾಡಿದ ವಾಟ್ಸಪ್ ಮೆಸೇಜ್, ಫೋಟೋಗಳನ್ನು ಸಾಕ್ಷಿಯಾಗಿ ಇಟ್ಟುಕೊಂಡು ದೂರು ನೀಡಲು ಯುವತಿಯ ತಂದೆ ಮುಂದಾಗಿದ್ದಾರೆ.

Leave a Reply

Your email address will not be published. Required fields are marked *