Wed. Nov 20th, 2024

ಮೇಷ ರಾಶಿ: ನೌಕರರಿಂದ ಕಾರ್ಯದಲ್ಲಿ ತೊಂದರೆ ಸಾಧ್ಯತೆ. ನಿಮ್ಮದಲ್ಲದ ಕಾರ್ಯವನ್ನು ಮಾಡಲು ಒಪ್ಪುಕೊಳ್ಳಲಾರಿರಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌

ವೃಷಭ ರಾಶಿ; ಸಹೋದ್ಯೋಗಿಗಳು ಸುಮ್ಮನೇ ತಡೆ ತರಬಹುದು. ನೀವು ಕೆಲಸ ಮಾಡುವ ಸಂಸ್ಥೆಯ ರಹಸ್ಯವನ್ನು ನೀವು ಬಿಟ್ಟುಕೊಡಲಾರಿರಿ. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಉತ್ಸಾಹವೂ ಇರಲಿದೆ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ನಿಮ್ಮ ದುರಭ್ಯಾಸವನ್ನು ಇನ್ನೊಬ್ಬರಿಗೂ ಹಿಡಿಸುವ ಸಾಧ್ಯತೆ ಇದೆ. ಭವಿಷ್ಯದ ಆಗುಹೋಗುಗಳ ಬಗ್ಗೆ ಅತಿಯಾದ ಚಿಂತೆ ಇರಲಿದೆ. ಸಿಕ್ಕಿದ್ದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿಯು ನಿಮ್ಮದಾಗಿದೆ. ಸುಮ್ಮನೇ ಇರುವುದು ನಿಮಗೆ ಇಂದು ಪ್ರಿಯವಾದೀತು.

ಮಿಥುನ ರಾಶಿ: ದುಷ್ಕಾರ್ಯಕ್ಕೆ ನಿಮ್ಮನ್ನು ಪ್ರಚೋದಿಸಬಹುದು. ಮನಸ್ಸು ಯಾವುದೋ ಕಾರಣಕ್ಕೆ ಭಾರವಾಗಬಹುದು. ಅನ್ಯರಿಂದ ಅಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ನೀವು ಧೈರ್ಯವನ್ನು ಬಿಡಲಾರಿರಿ. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಆಪತ್ತಿನ ಸಹಾಯಕ್ಕೆ ಪ್ರಶಂಸೆ ಸಿಗಲಿದೆ. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪಾಂಡಿತ್ಯವಿದೆ ಎಂದು ಪ್ರದರ್ಶಿಸಲಾಗದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ.

ಕಟಕ ರಾಶಿ: ಹಣ ಬರುವ ದಾರಿಯನ್ನೇ ನೋಡುತ್ತ ಕುಳಿತರೆ ಆಗದು. ಕಾರ್ಯವು ಆರಂಭವಾಗಲಿ. ಯಶಸ್ಸಿಗಾಗಿ ಏನನ್ನೂ ಮಾಡದೇ ಕರ್ತವ್ಯ ದೃಷ್ಟಿಯಿಂದ ಮಾಡಿದಾಗ ಯಶಸ್ಸು ನಿಮ್ಮನ್ನು ಬಂದು ಸೇರುವುದು. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ.‌ ನಿಮ್ಮ ಅಜ್ಞಾನವನ್ನು ಕಿರಿಯರು ಬಗೆಹರಿಸುವರು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು.

ಸಿಂಹ ರಾಶಿ: ಗುರಿಯ ಬಗ್ಗೆ ಯಾವುದೇ ಅಳುಕು ಇರದು. ಬಂಧುಗಳ ಕಾರಣದಿಂದ ಇಂದಿನ ಕಾರ್ಯದಲ್ಲಿ ತೊಡಕುಗಳು ಕಾಣಿಸಿಕೊಳ್ಳುವುದು. ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಪರಾವಲಂಬಿಯಾಗಿ ಹೆಚ್ಚು ಕಾಲ ಇರಲಾಗದು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖ್ಯಸ್ಥರಾಗಲು ಆಹ್ವಾನವು ಬರಬಹುದು.

ಕನ್ಯಾ ರಾಶಿ: ರಾಜಕೀಯದ ಅಸಹಜ ಬೆಳವಣಿಗೆಯಿಂದ ಅತಂತ್ರ ಸ್ಥಿತಿ ಕಾಣಿಸಿಕೊಳ್ಳಬಹುದು. ಸಾಲವನ್ನು ಇನ್ನೊಬ್ಬರಿಗಾಗಿ ಮಾಡಬೇಕಾದೀತು. ನಿಮ್ಮ ಸಂಕಷ್ಟಕ್ಕೆ ಯಾರನ್ನೋ ದೂರುತ್ತ ಇರುವುದು ಸರಿಯಲ್ಲ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ಆರ್ಥಿಕ ಸಮಸ್ಯೆಗೆ ಸಾಲ ಮಾಡುವುದೊಂದೇ ಆಗಿರದು. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌.

ತುಲಾ ರಾಶಿ: ಬೌದ್ಧಿಕ ಕಸರತ್ತಿಗೆ ನೀವು ಒಗ್ಗುವುದು ಕಷ್ಟ. ಇಂದು ನೀವು ಹೊರಟ ಕಾರ್ಯದಿಂದ ಅರ್ಧಕ್ಕೆ ಬರಬೇಕಾದೀತು. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಫಲಿತಾಂಶದಿಂದ ಹೊರಬರುವುದು ನಿಮಗೆ ಆಗದೇ ಇರಬಹುದು.

ವೃಶ್ಚಿಕ ರಾಶಿ: ಸ್ತ್ರೀಯರಿಗೆ ಸಂಬಂಧಿಸಿದ ವಿಚಾರದಲ್ಲಿ ಮನಸ್ತಾಪ ಕಾಣಿಸಿಕೊಳ್ಳುವುದು. ಹಣಕ್ಕಿಂತ ಆರೋಗ್ಯ ಮುಖ್ಯವಾದ ಕಾರಣ ಅಂತಹ ಸನ್ನಿವೇಶವನ್ನು ನೀವು ಅರ್ಥಮಾಡಿಕೊಳ್ಳಬೇಕು. ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿ‌ಯು ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ದೃಷ್ಟಿದೋಷದಿಂದ ಬೇರೆ ತೊಂದರೆಗಳು ಕಾಣಿಸಿಕೊಳ್ಳುವುದು.

ಧನು ರಾಶಿ: ಇಂದು ಬಂದ ಹಣವನ್ನು ಉಳಿಸಿಕೊಳ್ಳಲಾಗದ ಭೀತಿ ಕಾಡುವುದು. ನಿಮ್ಮನ್ನು ಅಗೌರವದಿಂದ ಕಾಣುವವರ ಮೇಲೆ‌ ಕೋಪ ಬರುವುದು. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ವಿದ್ಯಾಭ್ಯಾಸದಲ್ಲಿ ಸಹಪಾಠಿಗಳಿಂದ ತೊಂದರೆ. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಮಿತ್ರರು ನಿಮ್ಮ ಆರೋಗ್ಯವನ್ನು ವಿಚಾರಿಸಿಕೊಳ್ಳಬಹುದು.

ಮಕರ ರಾಶಿ: ವಾಹನ ಖರೀದಿಯ ಯೋಗವು ಸಫಲವಾಗುವುದು. ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ತಾತ್ಕಾಲಿಕವಾಗಿ ನಿಮ್ಮ ಸಮಸ್ಯೆಗಳು ನಿವಾರಣೆಯಾಗಲಿದ್ದು ಸ್ವಲ್ಪ ಉಸಿರಾಡುವುದಕ್ಕೆ ಅನುವುಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅತಿಯಾಗಿ ಬೇಕು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಅನುಭವಕ್ಕೆ ಬಾರದೇ ಏನನ್ನು ಒಪ್ಪಿಕೊಳ್ಳುವುದು ಬೇಡ.

ಕುಂಭ ರಾಶಿ: ಆದಾಯದ ಮಾರ್ಗವು ಸರಿಯಾಗಿ ಇರಲಿ. ಅಧರ್ಮದ ಆದಾಯವನ್ನು ಪಡೆಯುವ ಇಚ್ಛೆ ಬರದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಹೇಳಿಕೆಗಳು ನಿಮಗೆ ಉದ್ವೇಗವನ್ನು ಉಂಟಾಗಲಿದೆ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಅತಿಯಾದ ಕೊಪವು ವ್ಯವಹಾರಸ್ಥರು ಮೇಲೆ ತೊಂದರೆ ಕೊಡುವುದು. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಲ್ಲಿ ಭೀತಿಯ ಮನೋಭಾವವು ಇರಲಿದೆ.

ಮೀನ ರಾಶಿ: ಸಣ್ಣ ಮಾತೂ ದೊಡ್ಡ ಕಲಹಕ್ಕೆ ಕಾರಣವಾಗಬಹುದು. ನಿಮ್ಮ‌ ಸಾಮಾಜಿಕ‌ ಕಾರ್ಯಗಳಿಗೆ ಉತ್ತಮ‌ ಜನಸ್ಪಂದನೆ ಸಿಗಬಹುದು. ನೀವು ಉದ್ಯಮಿಗಳ ಜೊತೆ ಹೊಸ ಯೋಜನೆಯನ್ನು ಪಡೆಯುವ ತವಕದಲ್ಲಿ ಇರುವಿರಿ. ನಂಬಿಕೆ ದ್ರೋಹವು ನಿಮಗಾಗಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನವು ಸಿಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನಗತ್ಯ ವಿಚಾರವನ್ನು ಪ್ರಸ್ತಾಪಿಸಿ ವಿವಾದ ಮಾಡುವಿರಿ.

Leave a Reply

Your email address will not be published. Required fields are marked *