Wed. Nov 20th, 2024

Kasaragod: 18 ವರ್ಷಗಳ ಹಿಂದೆ ಕೊಲೆಯಾದ ಸಫಿಯಾಳ ತಲೆಬುರುಡೆ ಸ್ವೀಕರಿಸಿದ ಪೋಷಕರು – 13ನೇ ವಯಸ್ಸಿನಲ್ಲಿ ಕೊಲೆಯಾಗಿದ್ದ ಸಫಿಯಾ!! – ಏನಿದು ಘಟನೆ??, ಈಕೆಯನ್ನು ಕೊಲೆ ಮಾಡಿದ್ಯಾರು?!

ಕಾಸರಗೋಡು:(ನ.12) 18 ವರ್ಷಗಳ ಹಿಂದೆ ತನ್ನ 13ನೇ ವಯಸ್ಸಿನಲ್ಲಿ ತಾನು ಕೆಲಸಕ್ಕಿದ್ದ ಮನೆ ಮಾಲಕನಿಂದ ಕೊಲೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯ ಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ.

ಇದನ್ನೂ ಓದಿ: ⭕ಬಾಗಲಕೋಟೆ: ಮದುವೆಯಾಗಲು ನಿರಾಕರಿಸಿದ್ದಕ್ಕೆ 19 ರ ಯುವತಿ ಆತ್ಮಹತ್ಯೆ

ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ.‌ ಹಂಝ ಎಂಬವರ ಮನೆಯಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ ನಡುವೆ ಸುಟ್ಟ ಗಾಯಗಳಾಗಿತ್ತು.

ಈ ವಿಚಾರ ಹೊರಗೆ ತಿಳಿಯುವುದು ಬೇಡ ಎಂದು ಕೊಲೆಗೈದು ಹಲವು ತುಂಡುಗಳನ್ನಾಗಿ ಮಾಡಿ ಹೂತು ಹಾಕಿದ್ದರೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಘಟನೆ ನಡೆದಿದ್ದು, 2008 ಡಿಸೆಂಬರ್ ನಲ್ಲಿ. 2008ರಲ್ಲಿ ಗೋವಾದ ಅಣೆಕಟ್ಟಿನ ಬಳಿ ಈ ಮೂಳೆಗಳು ಪತ್ತೆಯಾಗಿದ್ದವು.


ಪ್ರಕರಣದ ಒಂದನೇ ಆರೋಪಿ ಹಂಝಾಗೆ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಆದರೆ ನಂತರ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು.


ಹಂಝಾ ಅಲ್ಲದೆ ಆತನ ಪತ್ನಿ ಮೈಮುನಾ ಕೂಡ ಆರೋಪಿಯಾಗಿದ್ದಾರೆ. ಚಾರ್ಜ್ ಶೀಟ್ ಜೊತೆಗೆ ತಲೆಬುರುಡೆ ಸೇರಿದಂತೆ ಭಾಗಗಳನ್ನು ಕ್ರೈಂ ಬ್ರಾಂಚ್ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ.

ಆದರೆ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಮಗಳ ಅಂತ್ಯಸಂಸ್ಕಾರ ಮಾಡಬೇಕೆಂದು ಕೋರಿ ಪೋಷಕರು ಕಳೆದ ತಿಂಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು.


ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ಶುಕೂರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಾನು ಎಸ್. ಪಣಿಕರ್ ದೇಹದ ಭಾಗಗಳನ್ನು ಪೋಷಕರಿಗೆ ಒಪ್ಪಿಸುವಂತೆ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ ಸಫಿಯಾ ಪೋಷಕರು ಮಗಳ ದೇಹಾವಶೇಷಗಳನ್ನು ಸ್ವೀಕರಿಸಿದರು.

Leave a Reply

Your email address will not be published. Required fields are marked *