Wed. Nov 20th, 2024

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಉಜಿರೆ:(ನ.13) “ಸಾಂಪ್ರದಾಯಿಕ ಆಚರಣೆಗಳ ಅರಿವು ವಿದ್ಯಾರ್ಥಿಗಳಿಗೆ ಬಹುಮುಖ್ಯ” ಎಂದು ಉಜಿರೆ ರತ್ನಮಾನಸದ ಪ್ರಧಾನ ನಿಲಯಪಾಲಕರಾದ ಶ್ರೀ ಯತೀಶ್ ಕೆ ಹೇಳಿದರು.

ಇದನ್ನೂ ಓದಿ: 🔴ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಚರಿಸಿದ ದೀಪಾವಳಿ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಆಚರಣೆಗಳಾದ ನರಕ ಚತುರ್ದಶಿ, ಗೋ ಪೂಜೆ, ಬಲಿಯೇಂದ್ರ ಪೂಜೆ, ಲಕ್ಷ್ಮೀ ಪೂಜೆ ಹಾಗೂ ತುಳಸಿ ಪೂಜೆ ಮಾಡಿ ಗುಂಪುಗಾಯನ ಹಾಗೂ ನೃತ್ಯ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ನಿಹಾ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಹೃತಿಕ್ ಪ್ರಸಾದ್ ಹಾಗೂ ಅಭೀಶ್ ವಂದಿಸಿದರು.

Leave a Reply

Your email address will not be published. Required fields are marked *