ಉಜಿರೆ:(ನ.13) ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ವಿಶ್ವ ಡಯಾಬಿಟಿಕ್ ದಿನದ ನಿಮಿತ್ತ “ಔಷಧವಾಗಿ ಆಹಾರ” ಕಾರ್ಯಗಾರವನ್ನು ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಉಜಿರೆ ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಸಹಯೋಗದಲ್ಲಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಇದನ್ನೂ ಓದಿ: 💠ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ
ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಮೋದ್ ಕುಮಾರ್. ಬಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ನೈಸರ್ಗಿಕ ಚಿಕಿತ್ಸೆ ಮತ್ತು ಪೌಷ್ಠಿಕತೆಯ ವಿಭಾಗದ ಡೀನ್ ಡಾ. ಗೀತಾ.ಬಿ ಶೆಟ್ಟಿ ಪೋಷಕರಿಗೆ ತಮ್ಮ ಆರೋಗ್ಯ ಹಾಗೂ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಉಚಿತವಾಗಿ ಡಯಾಬಿಟಿಕ್ ತಪಾಸಣೆ, ರಕ್ತದೊತ್ತಡ ತಪಾಸಣೆ, ದೇಹತೂಕ ಮೌಲ್ಯಮಾಪನ ಹಾಗೂ ಆಹಾರ ಸಲಹೆ ನೀಡಲಾಯಿತು.
ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ
ಕಾರ್ಯಕ್ರಮ ನಿರೂಪಿಸಿದ, ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ಶಿಕ್ಷಕಿ ಜಿಜಿ ಜೋಸ್ ವಂದಿಸಿದರು.