Sat. Apr 12th, 2025

Belthangady: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ (ನ.14) : ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 14 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಅತಿಥಿ, ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಯುವರಾಜ್ ಕಾರ್ಯಕ್ರಮ ಉದ್ಘಾಟಿಸಿದರು.

ಇದನ್ನೂ ಓದಿ: ⭕ಕಾರ್ಕಳ: ಮನೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡಿಗರ ಇತಿಹಾಸ, ಸದ್ಗುಣ ಹಾಗೂ ಕೊಡುಗೆಗಳನ್ನು ಶ್ಲಾಘಿಸಿದರು.

ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸಿ, ಯುವ ಬರಹಗಾರರಾಗಲು, ಸ್ವಭಾಷೆಯನ್ನು ಬೆಳೆಸಿ, ಅನ್ಯ ಭಾಷೆಯನ್ನು ಗೌರವಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಶಾಲೆಯ ಕಿಂಡರ್ಗಾರ್ಟನ್ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಿಕ್ಷಕ ಶ್ರೇಯಾಂಸ್ ಜೈನ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ನಿಧಿ ಸ್ವಾಗತಿಸಿ, ಸಂಜನಾ ವಂದಿಸಿ, ಪರಿಣಿತ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *