ಮಂಗಳೂರು:(ನ.14) ಮಂಗಳೂರಿನ ಅಲೋಶಿಯಸ್ ಕಾಲೇಜು ಉಪನ್ಯಾಸಕಿ ಒಬ್ಬರು ತಮ್ಮ ಕೊನೆಗಳಿಗೆಯಲ್ಲಿ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲಿಯೂ ಕೂಡ ಸಾರ್ಥಕತೆಯನ್ನು ಮೆರೆದಿದ್ದಾರೆ.
ಇದನ್ನೂ ಓದಿ: ⚖Aries to Pisces: ಸ್ನೇಹಿತನ ಸಹವಾಸದಿಂದ ಧನು ರಾಶಿಯವರಿಗೆ ದುರಭ್ಯಾಸವು ಬರಬಹುದು!!!
ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಕೆಲಸಕ್ಕೆ ಸೇರಿದ್ದರು. ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ಅವರು ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಬಳಲುತ್ತಿದ್ದರು. ಆದ್ರೆ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇದೀಗ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ.
ರೋಡ್ರಿಗಸ್ ಸಾವಿಗೆ ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಕಾರಣ?!
ಮೂಲಗಳ ಪ್ರಕಾರ ಕೇವಲ 23 ವರ್ಷ ವಯಸ್ಸಿನ ಗ್ಲೋರಿಯಾ ರೊಡ್ರಿಗಸ್ ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಕಾರಣ ಎನ್ನಲಾಗಿದೆ. ಸೇಂಟ್ ಅಲೋಶಿಯಸ್ ಕಾಲೇಜಿನ ವಾಣಿಜ್ಯ ವಿಭಾಗದ ಅಧ್ಯಾಪಕರಾಗಿದ್ದ ರೋಡ್ರಿಗಸ್ ಅವರು ಕೆಲವು ದಿನಗಳ ಹಿಂದೆ ಊಟ ಮಾಡಿದ ಕೂಡಲೇ ಅವರ ದೇಹದ ಮೇಲೆ ಅಲರ್ಜಿಯ ಪ್ರತಿಕ್ರಿಯೆ ಕಾಣಲಾರಂಭಿಸಿತು. ದೇಹದ ಚರ್ಮದ ಮೇಲೆ ದದ್ದುಗಳು ಏಳಲಾರಂಭಿಸಿತು. ಇದು ತೀವ್ರವಾದ ಮೆದುಳಿನ ಕಾಂಡದ ಅಸಾಧಾರಣ ಕ್ರಿಯೆಗೆ ಕಾರಣವಾಯಿತು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ವೈದ್ಯರ ಎರಡು ತಂಡಗಳು ಆಕೆಯನ್ನು 2 ಬಾರಿ ಶಸ್ತ್ರಚಿಕಿತ್ಸೆಗೆ ಒಳಪಡಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಪರಿಣಾಮ ಆಕೆಯ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ದೃಢಪಡಿಸಿದರು. ಆ ಬಳಿಕವೇ ಕುಟುಂಬಸ್ಥರು ಆಕೆಯ ಅಂಗಾಂಗ ದಾನಕ್ಕೆ ಮುಂದಾದರು ಎಂದು ಹೇಳಲಾಗಿದೆ. ಬುಧವಾರ ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆ ವೇಳೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಆಕೆಯ ಕುಟುಂಬ ಮತ್ತು ಸ್ನೇಹಿತರು ಹಾಜರಿದ್ದರು. ಆಕೆಯ ಅಕಾಲಿಕ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ, ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.