Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

ಮೇಷ ರಾಶಿ: ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತಿಯನ್ನು ಪಡೆಯುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ಸ್ವಂತ ವಾಹನದಿಂದ ನಿಮಗೆ ತೊಂದರೆಯಾಗಲಿದೆ. ಅನಿರೀಕ್ಷಿತ ಧನದಿಂದ ಸಂತೋಷವಾದರೂ ಅದನ್ನು ಸ್ವೀಕರಿಸಲಾರಿರಿ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ.

ವೃಷಭ ರಾಶಿ: ಬೆಂಬಲಿಸುವವರಿಲ್ಲದೇ ನಿಮಗೆ ಸೋಲಾಗಬಹುದು. ಆತ್ಮಾವಲೋಕನ ಮಾಡಿಕೊಳ್ಳುವುದು ನಿಮಗೆ ಯೋಗ್ಯ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ನಿಮ್ಮ ಮಾತು ಸುತ್ತಿ ಬಳಸಿ ನಿಮ್ಮ ಬುಡಕ್ಕೇ ಬರಲಿದೆ. ನೀವು ಅಂದಿಕೊಂಡಂತೆ ಸಹೋದರಿಯರಿಂದ ಸಹಕಾರ ದೊರೆಯುವುದಿಲ್ಲ. ಕುಟುಂಬದಲ್ಲಿ ನಿಮ್ಮ ಬಗ್ಗೆ ಭಯವು ಇರಲಿದೆ. ಪ್ರಯತ್ನಪಟ್ಟು ಮಾಡುವ ಕೆಲಸವು ನಿಮಗೆ ಅನುಕೂಲವನ್ನು ಮಾಡುವುದು. ಉದ್ವಿಗ್ನತೆಯು ಉಂಟಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು.

ಮಿಥುನ ರಾಶಿ: ದೇಹ ಭಾರ ಹಾಗೂ ಮನಸ್ಸಿನ ಭಾರವನ್ನು ಅಲ್ಪ ಕಡಿಮೆ ಮಾಡಿದರೆ ಬಹಳ ಹಿತವೆನಿಸುವುದು. ಏಕಕಾಲಕ್ಕೆ ಹಲವಾರು ಖರ್ಚುಗಳು ಬಂದು ನಿಮಗೆ ತಲೆಬಿಸಿ ಆಗಲಿದೆ. ನಿಮ್ಮ ಸಮಸ್ಯೆಗಳಿಗೆ ಹಲವರು ಹಲವು ರೀತಿಯ ಸಲಹೆಗಳನ್ನು ನೀಡಬಹುದು. ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗಲಾಗದು. ಅವರವರ ತೂಕವೇ ಬೇರೆ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವನ್ನು ನಿರೀಕ್ಷಿಸುವಿರಿ. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗಿ. ಪ್ರೇಯಸಿಯನ್ನು ದೂರಮಾಡಿಕೊಂಡು ದುಃಖಿಸುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ: ಯಾರ ಅವಲಂಬನೆಯೂ ನಿಮಗೆ ಹಿಡಿಸದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಇರಲಿದೆ. ಸ್ಥಿರಾಸ್ತಿಯನ್ನು ಖರೀದಿಸಲು ಉತ್ತಮ ಕಾಲವಿದು. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ಕ್ರೀಡಾಸಕ್ತಿಯನ್ನು ಹೆಚ್ಚು ಮಾಡಿಕೊಳ್ಳಬಹುದು. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸಬಹುದು. ನಿಮ್ಮ ಹಾರಿಕೆಯ ಮಾತುಗಳು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು.

ಸಿಂಹ ರಾಶಿ: ಮನಸ್ಸು ಕಠಿಣವಾದಷ್ಟೂ ಸಂಬಂಧಗಳು ಬಿರುಕುಬಿಡಬಹುದು. ನಿಮ್ಮ ಉದ್ಯೋಗದ ನಿಷ್ಠೆಯು ಮೇಲಧಿಕಾರಿಗಳಿಗೆ ಇಷ್ಟವಾಗುವುದು. ಇಂದು ಮಡದಿ, ಮಕ್ಕಳಿಂದಲೇ ಟೀಕೆಯನ್ನು ಕೇಳಬೇಕಾದೀತು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಅಶಿಸ್ತಿನ ಕಾರಣಕ್ಕೆ ಹಿರಿಯರಿಂದ ಉಪದೇಶ ಸಿಗಲಿದೆ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗಿ ಸ್ಪಂದಿಸುವ್ವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯವು ಬಹಳ ಇರಲಿದೆ. ನೀವು ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನಗಳು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ.

ಕನ್ಯಾ ರಾಶಿ: ಮನೆಯಲ್ಲಿ ಕಾರ್ಯದ ಒತ್ತಡ ಅಧಿಕವಾಗಿರುವುದು. ಇಂದು ನಿಮ್ಮ ವಿರೋಧಿಗಳನ್ನು ಸ್ತಬ್ಧಗೊಳಿಸುವಿರಿ. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಭೂಮಿಯನ್ನು ಉಳಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನ ಮಾಡುವಿರಿ. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದು ಸ್ವಭಾವವಿರುವುದು.

ತುಲಾ ರಾಶಿ; ಸ್ತ್ರೀಯರ ಜೊತೆ ವ್ಯವಹಾರದಿಂದ ದೂರವಿರುವುದು ಉತ್ತಮ. ವ್ಯವಸ್ಥೆಯ ಕೈಮೀರುವತ ತನಕ‌ ಅದನ್ನು ಬಿಡುವುದು ಬೇಡ. ನಿಮ್ಮ ಯಶಸ್ಸಿಗೆ ವಿರೋಧಿಗಳು ಅಡ್ಡಗಾಲು ಹಾಕಬಹುದು. ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವವಿರಲಿದೆ. ಸ್ಥಿರ ಮನಸ್ಸಿನಿಂದ ಯಾವುದನ್ನೂ ಒಪ್ಪಲಾರಿರಿ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿಮಗೆ ಮನಸ್ಸಾಗದು. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು.

ವೃಶ್ಚಿಕ ರಾಶಿ: ರಾಜಕಾರಣದಿಂದ ನೀವು ಪ್ರೇರಣೆ ಪಡೆಯುವಿರಿ. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶಗಳು ಸಿಗಲಿದೆ. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ನಿಮ್ಮ ರೂಢಿಗಳು ನಿಮಗೆ ಗೊತ್ತಾಗದಂತೆ ಬದಲಾಗಬಹುದು. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಇಂದು ನೀವು ಒತ್ತಡದ ಕೆಲಸದಿಂದ ವಿರಾಮ ಪಡೆದುಕೊಳ್ಳಲು ಬಯಸುವಿರಿ.

ಧನು ರಾಶಿ: ದುಃಖವನ್ನು ಎಷ್ಟೇ ಹಿಡಿದಿಟ್ಟರೂ ಅದು ಅಸ್ಥಾನದಲ್ಲಿ ಪ್ರಕಟವಾಗಬಹುದು. ನಿಮ್ಮ ಬೆಳವಣಿಕೆಗೆಯು ಸಾತ್ತ್ವಿಕ ರೀತಿಯಲ್ಲಿ ಇರಲಿ. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ನಿಮ್ಮ ಕಾರ್ಯವೇ ದೀರ್ಘವಾಗಬಹುದು. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ಸಂಗಾತಿಯ ಜೊತೆ ಹೊಂದಾಣಿಕೆಯನ್ನು ಬೆಳೆಸಿಕೊಳ್ಳದಿದ್ದರೆ ಕಷ್ಟವಾದೀತು.

ಮಕರ ರಾಶಿ: ಸಮರ್ಪಕವಾದ ನಿಲುವನ್ನು ಹೊಂದಿದರೆ ನಿಮಗೇ ಮುಂದಿನ ಮಾರ್ಗ ತೆರೆಯುವುದು. ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರದರ್ಶನ ಇರಲಿದೆ. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಉಪಯೋಗಿಸಿಕೊಳ್ಳಬಹುದು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಕೋಪಿಷ್ಠರ ಜೊತೆ ವ್ಯವಹಾರ ಕಷ್ಟ. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಹೆಚ್ಚಿರುವುದು.

ಕುಂಭ ರಾಶಿ; ಪರಧನವನ್ನು ಪಡೆದು ಸ್ವತಂತ್ರವಾಗಿ ಇರಲಾಗದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ವಿದೇಶ ಪ್ರಯಾಣದ ಗುಂಗಿನಲ್ಲಿ ನೀವು ಇರುವಿರಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗುವುದು. ಸಂಗಾತಿಯ ಜೊತೆ ಸಮಯವನ್ನು ಕಳೆಯುವಿರಿ. ನಿಮ್ಮ ತಪ್ಪನ್ನು ಎತ್ತಿ ತೋರಿಸುವವರು ಇಂದು ಕಾಣಿಸುವರು. ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು.

ಮೀನ ರಾಶಿ: ಸಡಿಲವಾದಷ್ಟು ನಿಮಗೇ ತೊಂದರೆ. ಎಲ್ಲಿಯೂ ಹಿಡಿತ ತಪ್ಪದಂತೆ ನೋಡಿಕೊಳ್ಳಿ. ಖಾಸಗಿ ಉದ್ಯೋಗದಲ್ಲಿ ಇದ್ದವರಿಗೆ ತೊಂದರೆ. ನಿಮಗೆ ವ್ಯವಹಾರವು ಅಂದುಕೊಂಡಷ್ಟು ಸಾಧಿಸಲಾಗದೇ ಇಂದು ಬೇಸರವಾಗಬಹುದು. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ.

Leave a Reply

Your email address will not be published. Required fields are marked *