ಮಧ್ಯಪ್ರದೇಶ:(ನ.16) ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ತನ್ನ ಪತಿಯೊಂದಿಗೆ ಬೇರೊಬ್ಬ ಯುವತಿಯನ್ನು ಕಂಡು ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆಕೆಗೆ ಮನಬಂದಂತೆ ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮೊಬೈನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
https://www.instagram.com/reel/DCVl1T1ICP2/?utm_source=ig_web_button_share_sheet
ಉಷಾ ಆರ್ಯ ಎಂದು ಗುರುತಿಸಲಾದ ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿ ಜಿತೇಂದ್ರ ಮಾಜಿ ಪ್ರೇಯಸಿ ಪೂಜಾ ಜೊತೆಗೆ ಓಡಾಡುತ್ತಿರುವುದನ್ನು ಗಮನಿಸಿದ್ದಾಳೆ. ಸರಿಯಾದ ಸಮಯಕ್ಕಾಗಿ ಕಾದು ಕುಳಿತಿದ್ದ ಉಷಾ ಮೊನ್ನೆಯಷ್ಟೇ ರೆಡ್ ಹ್ಯಾಂಡ್ ಹಿಡಿದಿದ್ದಾಳೆ. ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಮನಬಂದಂತೆ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರನ್ನೂ ನಾನಾಖೇಡ ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆಯ ವೇಳೆ ಜಿತೇಂದ್ರನಿಗೆ ಈಗಾಗಲೇ ಎರಡು ಮದುವೆಯಾಗಿದ್ದು, ಮೂರನೇ ಬಾರಿಗೆ ಮದುವೆಯಾಗಲು ಬಯಸಿರುವುದಾಗಿ ತಿಳಿದುಬಂದಿದೆ.