ಕಾಪು: (ನ.17) ಕಾಂಗ್ರೆಸ್ ಮುಖಂಡನ ಪುತ್ರನ ಥಾರ್ ಜೀಪ್, ಅಮಾಯಕ ರಿಕ್ಷಾ ಚಾಲಕನ ಬಲಿ ಪಡೆದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ.
ಇದನ್ನೂ ಓದಿ: 🔴ಬೆಳ್ತಂಗಡಿ: ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು
ಕಾಂಗ್ರೆಸ್ ಮುಖಂಡ, ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯ ಓವರ್ ಸ್ಪೀಡ್ ಗೆ ರಿಕ್ಷಾ ಚಾಲಕರೊಬ್ಬರು ಕೊನೆಯುಸಿರೆಳೆದಿದ್ದಾರೆ. ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದ ಆ್ಯಕ್ಸಿಡೆಂಟ್ ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅಪಘಾತದ ತೀವ್ರತೆಯನ್ನು ತೋರಿಸುತ್ತದೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿಯವರ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಹಿಟ್ ಆ್ಯಂಡ್ ರನ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.