ಬೆಳಾಲು: (ನ.18) ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆ ಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ,
ಇದನ್ನೂ ಓದಿ: ⭕ಮಲ್ಪೆ: ನೀರಿನ ಡ್ರಮ್ ಒಳಗೆ ಬಸ್ ಡ್ರೈವರ್ ಮೃತದೇಹ ಪತ್ತೆ
ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಇಂದುಮತಿ ಹಣ್ಣು, ತರಕಾರಿ,
ಧಾನ್ಯಗಳ ಸಂರಕ್ಷಣಾ ವಿಧಾನಗಳಲ್ಲಿ ಪ್ರಗತಿ ಈ ವಿಷಯದಲ್ಲಿ ರಚಿಸಿದ ಪ್ರಬಂಧಕ್ಕೆ ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಬಂದಿರುತ್ತದೆ.
ಈ ಪ್ರಬಂಧದ ಪ್ರಕಟಣೆಯು 2024 ನವಂಬರ್ 27ರಂದು ಕಣಾದ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ಪ್ರಕಟಿಸಲಾಗುತ್ತದೆ ಎಂದು
ಸಂಘಟಕರು ತಿಳಿಸಿರುವುದಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.