ಪುತ್ತೂರು:(ನ.18) ಇತಿಹಾಸ ಪ್ರಸಿದ್ದ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.28 ಮತ್ತು 29ರಂದು ನಡೆಯುವ
ಇದನ್ನೂ ಓದಿ: ⭕ಬೆಂಗಳೂರು: ಅಪ್ರಾಪ್ತ ಬಾಲಕಿಯ ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳಕ್ಕೆ ಯತ್ನ
ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರವನ್ನು ನ.18ರಂದು ಶ್ರೀ ಸುಬ್ರಹ್ಮಣ್ಯ ನರಸಿಂಹ ಸಂಪುಟದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಬಿಡುಗಡೆಗೊಳಿಸಿದರು.
ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಶ್ರೀ ದೇವರಿಗೆ ಆಮಂತ್ರಣ ಪತ್ರ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿ ಬಳಿಕ ದೇವಸ್ಥಾನದ ಹೋರಾಂಗಣದಲ್ಲಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಗೌರವಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಚಂದಪ್ಪ ಮೂಲ್ಯ, ಗೋಪಾಲಕೃಷ್ಣ ಭಟ್, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಕಾರ್ಯಧ್ಯಕ್ಷ ಉಮೇಶ್ ಕೋಡಿಬೈಲು,
ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ, ಜೊತೆ ಕಾರ್ಯದರ್ಶಿ ಹರೀಶ್ ಮರುವಾಳ ಹಾಗೂ ಸಂತೋಷ್ ಮುಕ್ರಂಪಾಡಿ, ರಾಜು ಶೆಟ್ಟಿ, ಗಣೇಶ್ಚಂದ್ರ ಭಟ್ ಮಕರಂದ ಹಾಗು ಪ್ರವೀಣ್ ಶೆಟ್ಟಿ ತಿಂಗಳಾಡಿ,
ಸಂಚಾಲಕ ಪ್ರಸನ್ನ ಕುಮಾರ್ ಮಾರ್ತ ಹಾಗು ಅನಿಲ್ ತೆಂಕಿಲ, ರಾಜೇಶ್ ಅನಂತಾಡಿ, ಗಿರೀಶ್ ಕೂಡುರಸ್ತೆ, ಉಮೇಶ್ ಎಸ್.ಕೆ. ಭೀಮಯ್ಯ ಭಟ್, ಕೃಷ್ಣ ಪ್ರಸಾದ್ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.