Sat. Apr 19th, 2025

Belthangadi : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದ ನೂತನ ಸಭಾಭವನ ಉದ್ಘಾಟನೆ – ಜಿಲ್ಲಾ ಮಟ್ಟದ ಸ್ಕೌಟರ್‌ – ಗೈಡರ್‌ ಸಮಾವೇಶ

ಬೆಳ್ತಂಗಡಿ :(ನ.20) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಸಂಸ್ಥೆಯು ತನ್ನ ಶತಮಾನೋತ್ಸವ ಇದರ ಸವಿನೆನಪಿಗಾಗಿ ನೂತನ ಕಟ್ಟಡ ಉದ್ಘಾಟನೆಯನ್ನು ಸಾಂಕೇತಿಕವಾಗಿ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಗೆ ವಿಶೇಷ ಪ್ರೋತ್ಸಾಹ ,

ಇದನ್ನೂ ಓದಿ: ⭕Bengaluru: ಎಲೆಕ್ಟ್ರಿಕ್‌ ವಾಹನ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ

ಸಲಹೆ ಸೂಚನೆ , ಕಾರ್ಯಕ್ರಮ ನಡೆಸಲು ಸ್ಥಳಾವಕಾಶ , ಹಾಗೂ ಸಹಕಾರ ನೀಡುತ್ತಾ ಬಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು (ರಿ ) ಉಜಿರೆ ಸಂಸ್ಥೆಯ ಕಾರ್ಯದರ್ಶಿಯವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯು ಗೌರವಿಸಿ ಸನ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪರವಾಗಿ ಪದವಿ ಕಾಲೇಜಿನ ಮಾನ್ಯ ಪ್ರಾಂಶುಪಾಲರಾದ ಡಾ ಬಿ.ಎ ಕುಮಾರ್ ಹೆಗ್ಡೆ ಯವರನ್ನು ನ.19 ರಂದು ಮಂಗಳೂರಿನ ಪಿಲಿಕುಳದಲ್ಲಿ ನಡೆದ ಸಭಾರಂಭದಲ್ಲಿ ಗೌರವವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ. ಆರ್ ಸಿಂಧ್ಯಾ , ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತರಾದ ಡಾ.ಮೋಹನ್ ಆಳ್ವ, ರಾಜ್ಯ ಸಂಸ್ಥೆಯ ಕಾರ್ಯದರ್ಶಿ ಗಂಗಪ್ಪ ಗೌಡ, ರಾಷ್ಟ್ರೀಯ ಸ್ಕೌಟ್ ಆಯುಕ್ತರಾದ ಸುಕುಮಾರ್,

ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಜಿಲ್ಲಾ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ಮಡಿಕೇರಿ ಜಿಲ್ಲಾ ಸ್ಕೌಟ್ ಗೈಡ್ಸ್ ಆಯುಕ್ತರಾದ ಬೇಬಿ ಮ್ಯಾಥ್ಯ್ , ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಭಟ್,

ಜಿಲ್ಲಾ ಸ್ಕೌಟ್ ಆಯುಕ್ತರಾದ ಬಿ ಎಂ ತುಂಬೆ , ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಮೊದಲಾದವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಶಿಕ್ಷಣ ಸಂಸ್ಥೆಯನ್ನು ಗೌರವಿಸಿ ಸನ್ಮಾನಿಸಿದರು.

Leave a Reply

Your email address will not be published. Required fields are marked *