Sat. Apr 19th, 2025

Udupi: ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ:(ನ.20) ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ⭕ಬಾಂಗ್ಲಾದೇಶ: ಮುಸ್ಲಿಂ ಯುವತಿಯ ಪ್ರೀತಿಸಿದ್ದಕ್ಕೆ ಹಿಂದೂ ಯುವಕನನ್ನು ಕೊಂದೇಬಿಟ್ಟ ಮೌಲ್ವಿಗಳು.!!

ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಕೀರ್ತನಾ ಅವರ ಪುಷ್ಟಭದ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *