Sat. Nov 23rd, 2024

Dharmasthala:(ನ.26 -ನ.30) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಧರ್ಮಸ್ಥಳ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದ ಬಹುಳ ಏಕಾದಶಿಯಿಂದ ಅಮಾವಾಸ್ಯೆವರೆಗಿನ ಮಂಗಳಪರ್ವದಲ್ಲಿ ನಡೆಯುವ

ಇದನ್ನೂ ಓದಿ: ⭕ಕನ್ಯಾಡಿ: ಸಂಘ ಪರಿವಾರದ ಹಿರಿಯ ಕಾರ್ಯಕರ್ತರಾದ ಕನ್ಯಾಡಿ ಬಿ.ಸುಬ್ರಹ್ಮಣ್ಯ ರಾವ್ ನಿಧನ

ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.26ರಿಂದ ನ.30ರವರೆಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ವೈಭವಪೂರ್ಣವಾಗಿ ನಡೆಯಲಿದೆ.

ನ. 26 ರಂದು ಸಂಜೆ 3 ಗಂಟೆಗೆ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಮಾಜಿ ವಿ.ಪ.ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು.


ನ.28ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5.30ರಿಂದ 7 ಗಂಟೆ ವರೆಗೆ ನಾಗಸ್ವರ ವಾದನ, 7ರಿಂದ 8ರ ವರೆಗೆ ಸಾತ್ವಿಕ ಸಂಗೀತ. ಬಳಿಕ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ.

ನ. 29ರಂದು ಸರ್ವಧರ್ಮ ಸಮ್ಮೇಳನ

ಅಮೃತವರ್ಷಿಣಿ ಸಭಾಭವನದಲ್ಲಿ ನ.29ರಂದು ಸಂಜೆ 5 ಗಂಟೆಯಿಂದ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ರಾಜ್ಯ ಗೃಹ ಸಚಿವ ಡಾ| ಜಿ.ಪರಮೇಶ್ವರ ಉದ್ಘಾಟಿಸುವರು. ಬೆಂಗಳೂರು ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವದು. ಬಳಿಕ ಸಂಶೋಧಕ ಡಾ| ಜಿ.ಬಿ.ಹರೀಶ, ಡಾ| ಜೋಸೆಫ್ ಎನ್.ಎಂ., ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಹಾಗೂ 8.30ರಿಂದ ಭರತನಾಟ್ಯ ನೆರವೇರಲಿದೆ.

ನ.30ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನೀ ಡಾ| ರಾ. ಗಣೇಶ ಉದ್ಘಾಟಿಸುವರು. ನ.26ರಿಂದ ಡಿ.1ರ ವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ನ.26ರಂದು ಬೆಳಗ್ಗೆ 10.30ಕ್ಕೆ ಎಸ್‌ಪಿ ಯತೀಶ್ ಎನ್. ಉದ್ಘಾಟಿಸಲಿರುವರು. ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿಕೈಗಾರಿಗಳಿಗೆ ಸಂಬಂಧಿಸಿದ 300ಕ್ಕೂ ಮಿಕ್ಕಿ ಮಳಿಗೆಗಳು ಇರಲಿವೆ.

ಡಿ.1ರಂದು ಸಂಜೆ 6.30ರಿಂದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ಈ ವೇಳೆ ಚಿನಗಾನೋತ್ಸವ ನಡೆಯಲಿದೆ. ಹೇಮಾವತಿ ವೀ.ಹೆಗ್ಗಡೆ, ಪ್ರೊ| ಎಸ್.ಪ್ರಭಾಕರ್, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ಸಹಿತ ಸಮಿತಿ ಸ್ವಾಗತ ಸಮಿತಿ ಪ್ರಮುಖರು ಉಪಸ್ಥಿತರಿರುವರು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ನ.29ರಂದು ಸರ್ವಧರ್ಮ ಸಮ್ಮೇಳನ ಹಾಗೂ ನ.30ರಂದು ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ಜರುಗಲಿದೆ.

Leave a Reply

Your email address will not be published. Required fields are marked *