Wed. Apr 16th, 2025

Mangaluru: ಬೆಳ್ಳಂಬೆಳಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

ಮಂಗಳೂರು:(ನ.21) ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರ (ನ.21) ರಂದು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 🔴ಉಜಿರೆ:(ಡಿ.2 – ಡಿ.31) ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ದ್ವಿಚಕ್ರ ವಾಹನ ದುರಸ್ಥಿ ಉಚಿತ ತರಬೇತಿ

ಲೋಕಾಯುಕ್ತ ಎಸ್‌ಪಿ ನಟರಾಜ್‌ ನೇತೃತ್ವದಲ್ಲಿ ಏಕಕಾಲದಲ್ಲಿ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಮಂಗಳೂರಿಗೆ ಕೃಷ್ಣವೇಣಿಯವರು ಎರಡು ತಿಂಗಳ ಹಿಂದೆಯಷ್ಟೇ ವರ್ಗಾವಣೆಗೊಂಡು ಬಂದಿದ್ದರು. ಇವರು ವೆಲೆನ್ಸಿಯಾದಲ್ಲಿರುವ ಫ್ರೆಡ್‌ ರೋಸ್‌ ಎನ್ಕಲೇವ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದಾರೆ. ಮಂಗಳೂರು, ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಬಂದಿದ್ದು, ಕಚೇರಿ ಮತ್ತು ಮನೆ ಮೇಲೆ ದಾಳಿ ಮಾಡಿದೆ.

Leave a Reply

Your email address will not be published. Required fields are marked *