ನ್ಯೂಯಾರ್ಕ್: (ನ.21) ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಇದನ್ನೂ ಓದಿ: 🐘ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಒಂಟಿಸಲಗ ಅಟ್ಯಾಕ್
₹2,237 ಕೋಟಿ ಲಂಚದ ಆರೋಪದಲ್ಲಿ ಗೌತಮ್ ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ವಿರುದ್ಧ ಐದು ಅಂಶಗಳ ಕ್ರಿಮಿನಲ್ ಆರೋಪಪಟ್ಟಿಯನ್ನು ನ್ಯೂಯಾರ್ಕ್ ನ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಅಮೆರಿಕದ ಪ್ರಾಸಿಕ್ಯೂಟರ್ ಸಲ್ಲಿಸಿದ್ದರು.
ಭಾರತದಲ್ಲಿ ಬೃಹತ್ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗಾಗಿ ಮುಂದಿನ 20 ವರ್ಷಗಳಲ್ಲಿ 2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಆಕರ್ಷಿಸಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಹಾಗೂ ಅಮೆರಿಕ ಒಳಗೊಂಡಂತೆ ವಿದೇಶಿ ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ ಆರೋಪವು ಇವರ ಮೇಲಿದೆ.
ಆರೋಪಿಗಳಾದ ಗೌತಮ್ ಎಸ್. ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ಅವರು ಬಿಲಿಯನ್ ಗಟ್ಟಲೆ ಡಾಲರ್ ಮೌಲ್ಯದ ಗುತ್ತಿಗೆ ಪಡೆಯಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚವನ್ನು ನೀಡುವ ಮೂಲಕ ಸಂಚು ರೂಪಿಸಿದ್ದಾರೆ.
ಆ ಮೂಲಕ ಅಮೆರಿಕ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರಿಂದ ಬಂಡವಾಳ ಪಡೆಯುವ ಸಂಚು ಹೊಂದಿದ್ದರು ಎಂದು ಅಮೆರಿಕದ ಅಟಾರ್ನಿ ಜನರಲ್ ಬ್ರಾನ್ ಪೀಸ್ ಹೇಳಿದ್ದಾರೆ.