Sat. Nov 23rd, 2024

Ujire: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್(ರಿ.) ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ಮತ್ತು ಧರ್ಮಸ್ಥಳ ವಲಯಗಳ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಭಾ ಕಾರ್ಯಕ್ರಮ

ಉಜಿರೆ :(ನ.22) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು, ಉಜಿರೆ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಜಿರೆ, ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ, ಪ್ರಗತಿ ಬಂಧು ಒಕ್ಕೂಟಗಳು ಉಜಿರೆ ವಲಯದ ಸಂಯುಕ್ತ ಆಶ್ರಯದಲ್ಲಿ, 40ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ನ.22 ರಂದು ಉಜಿರೆ ಎಸ್.ಡಿ.ಎಂ. ಕಾಲೇಜು ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ಜರುಗಿತು.

ಇದನ್ನೂ ಓದಿ: 🔴ಕತಾರ್ : ಕತಾರ್ ನಲ್ಲಿ ಕನ್ನಡಿಗರಿಂದ ಅಭೂತಪೂರ್ವ ಮೆಚ್ಚುಗೆಗೆ ಪಾತ್ರವಾದ “ಭೈರತಿ ರಣಗಲ್”

ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸದ್ದರು. ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮಂಜೂರಾತಿ ಪತ್ರ ಮತ್ತು ಸಲಕರಣೆಯನ್ನು ವಿತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಸಾಧಕರನ್ನು ಸನ್ಮಾನಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪ್ರಶಾಂತ್ ಜೈನ್, ಬೆಳ್ತಂಗಡಿ ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್ ಉಪಸ್ಥಿತರಿದ್ದರು.


ಈ ವೇಳೆ 17 ಒಕ್ಕೂಟಗಳಿಂದ ಜವಾಬ್ದಾರಿಯನ್ನು (ನಿಕಟಪೂರ್ವ ಪದಾಧಿಕಾರಿಗಳಿಂದ ನೂತನ ಪದಾಧಿಕಾರಿಗಳಿಗೆ) ಡಾ. ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು. ಪೂಜಾ ಸಮಿತಿಯಿಂದ ಕೇಂದ್ರ ಒಕ್ಕೂಟದಿಂದ ಹಾಗೂ ಸಂಘ ಸಂಸ್ಥೆಗಳಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಸತ್ಯನಾರಾಯಣ ಪೂಜಾ ಸಮಿತಿ ಪದಾಧಿಕಾರಿಗಳು, ಉಜಿರೆ ಧರ್ಮಸ್ಥಳ ವಲಯದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ, ಧರ್ಮಸ್ಥಳ ವಲಯದ ನಿಕಟಪೂರ್ವ ಹಾಗೂ ನೂತನ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಲತಾ ಪ್ರಾರ್ಥಿಸಿ, ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿ, ಉಜಿರೆ ಮೇಲ್ವಿಚಾರಕಿ ವನಿತಾ ವರದಿ ವಾಚಿಸಿದರು. ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *