ಕಾರ್ಕಳ:(ನ.23) ಶಾಲಾ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ನಡೆದಿದೆ.

ಇದನ್ನೂ ಓದಿ: ⭕ಕೇರಳ : ಹಾಸ್ಟೆಲ್ ಬಾತ್ ರೂಂ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!!
ಮೃತಪಟ್ಟವರು ಸ್ಥಳೀಯ ನಿವಾಸಿ ಅಜಿತ್ ಕುಮಾರ್ ಎಂದು ತಿಳಿದು ಬಂದಿದೆ. ಅಪಘಾತ ಸಂದರ್ಭ ಶಾಲೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲ. ಖಾಲಿ ಬಸ್ ಎನ್ನಲಾಗಿದೆ.



ಬಸ್ ಮಧ್ಯ ಭಾಗಕ್ಕೆ ಬೈಕ್ ಡಿಕ್ಕಿಯಾಗಿದ್ದು, ತಲೆಗೆ ತೀವ್ರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
