Sat. Nov 23rd, 2024

ಉಜಿರೆ:(ನ.23) ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಶಾಲಾ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೊ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಇದನ್ನೂ ಓದಿ: ⭕ಬೆಂಗಳೂರು: ಗಂಡ ಹೆಂಡತಿ ಜಗಳ ಮಕ್ಕಳ ಕೊಲೆಯಲ್ಲಿ ಅಂತ್ಯ

ಲೋಬೊ ಮೋಟಾರ್ಸ್‍ನ ಮಾಲಕರಾದ ಶ್ರೀ ರೋನಾಲ್ಡ್ ಲೋಬೊ ರವರು ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು ಹಾಗೂ ಮಕ್ಕಳಿಂದ ನಡೆದ ಆಕರ್ಷಣೀಯ ಪಥ ಸಂಚಲನದಲ್ಲಿ ಗೌರವ ರಕ್ಷೆಯನ್ನು ಸ್ವೀಕರಿಸಿದರು.

ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಪ್ರಾರ್ಥನೆಯ ನಂತರ ಶಾಲಾ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ರವರು ಎಲ್ಲರನ್ನೂ ಸ್ವಾಗತಿಸಿದರು.

ಸಮಾರಂಭದ ಮುಖ್ಯ ಅತಿಥಿಗಳಾದ ಶ್ರೀ ರೋನಾಲ್ಡ್ ಲೋಬೊ ರವರನ್ನು ಸನ್ಮಾನಿಸಲಾಯಿತು ಹಾಗೂ ಅವರು ಕ್ರೀಡಾಕೂಟಕ್ಕೆ ಶುಭಾಶಯವನ್ನು ಕೋರಿದರು. ಸಮಾರಂಭದ ಅಧ್ಯಕ್ಷರಾದ ವಂ! ಫಾ! ಅಬೆಲ್ ಲೋಬೊ ರವರು ಅಧ್ಯಕ್ಷೀಯ ಭಾಷಣದ ಮೂಲಕ ಕ್ರೀಡಾಕೂಟಕ್ಕೆ ಶುಭಕೋರಿದರು.

ತದನಂತರ ಮಕ್ಕಳಿಂದ ಏರೋಬಿಕ್ ನೃತ್ಯ ಪ್ರದರ್ಶಿಸಲಾಯಿತು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಶ್ರೀ ಆಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಉಮೇಶ್ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಅನಿಲ್ ಡಿ’ಸೋಜ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಅನಿತಾ ಮೋನಿಸ್‍ರವರು ಉಪಸ್ಥಿತರಿದ್ದರು.

ಶ್ರೀಮತಿ ಐರಿನ್ ರೊಡ್ರಿಗಸ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಫಿಲೋಮಿನಾರವರು ಧನ್ಯವಾದವನ್ನಿತ್ತರು. ತದನಂತರ ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳು ನೆರವೇರಲ್ಪಟ್ಟು ಅಪರಾಹ್ನ 4 ಗಂಟೆಗೆ ಸಮಾರೋಪ ಸಮಾರಂಭ ನಡೆದು ಕ್ರೀಡಾಕೂಟವು ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *