Wed. Apr 16th, 2025

New Delhi: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು 5 ವರ್ಷದ ಮಗುವನ್ನು ಕೊಂದ ಪಾಪಿ ತಾಯಿ

ನವದೆಹಲಿ:(ನ.24) ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ತನ್ನ ಐದು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಇನ್‌ ಸ್ಟಾಗ್ರಾಮ್‌ನಲ್ಲಿ ಸ್ನೇಹಿತರಾಗಿದ್ದ ವ್ಯಕ್ತಿಯನ್ನು ಆಕೆ ಮದುವೆಯಾಗಲು ಬಯಸಿದ್ದಳು.

ಇದನ್ನೂ ಓದಿ: ⭕ಬೆಂಗಳೂರು: ನಿನ್ನ ನೋಡ್ಬೇಕು ಬಾ ಅಂತ ಕರೆದ ಎಕ್ಸ್ ಲವ್ವರ್‌

ಆದರೆ, ಆತ ಆಕೆಯ ಮಗಳನ್ನು ಸ್ವೀಕರಿಸಲು ಸಿದ್ಧನಿರಲಿಲ್ಲ. ಹೀಗಾಗಿ, ಆತನ ಜೊತೆ ಹೋಗುವ ಸಲುವಾಗಿ ಆಕೆ ಹೆತ್ತ ಮಗಳನ್ನೇ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.


ದೀಪ್ ಚಂದ್ ಬಂಧು ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋದಾಗ ಮಗು ಸತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸ್ ಅಧಿಕಾರಿಗಳು ಶವದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ, ಮಗುವಿನ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳು ಪತ್ತೆಯಾಗಿವೆ.


ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಮತ್ತು ಮಗುವಿನ ತಾಯಿ ಮತ್ತು ಇತರ ಸಂಬಂಧಿಕರನ್ನು ವಿಚಾರಣೆಗಾಗಿ ಕರೆಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ತೀವ್ರ ವಿಚಾರಣೆಯ ಸಮಯದಲ್ಲಿ ತಾಯಿ ತನ್ನ ಸ್ವಂತ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.


ಆಕೆಯ ಮೊದಲ ಪತಿ ಅವಳನ್ನು ತೊರೆದ ನಂತರ, ಮಹಿಳೆ ಇನ್‌ ಸ್ಟಾಗ್ರಾಂನಲ್ಲಿ ರಾಹುಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಿ ಸ್ನೇಹ ಬೆಳೆಸಿದ್ದಳು. ಇದರ ನಂತರ, ಮಹಿಳೆ ತನ್ನ ಇನ್‌ಸ್ಟಾಗ್ರಾಂ ಸ್ನೇಹಿತನನ್ನು ಮದುವೆಯಾಗಲು ದೆಹಲಿಗೆ ತೆರಳಲು ನಿರ್ಧರಿಸಿದಳು.

ಆದರೆ ಆ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮಗುವನ್ನು ಸ್ವೀಕರಿಸಲು ನಿರಾಕರಿಸಿದರು. ಇದರಿಂದ ಹತಾಶಳಾದ ಮಹಿಳೆ ತನ್ನ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *