ಮೇಷ ರಾಶಿ: ವಿಧಿಯನ್ನು ಸಮಯವನ್ನು ಮೀರದೇ ಕಾರ್ಯವನ್ನು ಮಾಡಲು ಪ್ರಯತ್ನಿಸಿ, ಸಾಧ್ಯವಾದರೆ ಸಾಧಿಸಿ. ನಿಮ್ಮ ನಿಜವಾದ ಪ್ರಯತ್ನಕ್ಕೆ ದೈವವೂ ಸಹಾಯ ಮಾಡುವುದು. ಇಂದು ಕಷ್ಟವಾದರೂ ಸಂತೋಷದಿಂದ ಕೆಲಸವನ್ನು ಮಾಡುವಿರಿ. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ಪ್ರಯಾಣದಲ್ಲಿ ಜಾಗರೂಕತೆ ಇರಲಿ. ಗೊಂದಲ ವಾತಾವರಣವನ್ನು ನೀವು ಸೃಷ್ಟಿಮಾಡಿಕೊಳ್ಳುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ನಿಮ್ಮ ಮಾತಿನಿಂದ ತಾಯಿಗೆ ಬೇಸರವಾಗಲಿದೆ.
ವೃಷಭ ರಾಶಿ: ಸಾಹಸಕ್ಕೆ ಒಂದು ಮಿತಿ ಇರಲಿ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾರಿಂದಲೂ ಆರ್ಥಿಕ ಸಹಾಯವು ಸಿಗದೇ ಕಷ್ಟವಾದೀತು. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದು. ಗೌಣವಾದುದನ್ನು ಪ್ರಾಮುಖ್ಯ ಮಾಡುವುದು ಬೇಡ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಸ್ತಿಕೆ ಬೇಡ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭೀತಿಯು ಇರಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ. ಅಶುಭವಾರ್ತೆಯಿಂದ ಇಂದಿನ ಕಾರ್ಯವೆಲ್ಲ ಹಾಳಾಗಬಹುದು.
ಮಿಥುನ ರಾಶಿ: ಒಳ್ಳೆಯವರನ್ನೇ ಅನುಮಾನಿಸುವಂತೆ ಮಾಡಬಹುದು. ಇಂದು ಆಪ್ತರು ನಿಮಗೆ ಬರುವ ಸಂಕಟದಲ್ಲಿ ಜೊತೆಯಾಗುವರು. ಸಮಯೋಚಿತ ಸಲಹೆಯಿಂದ ಬರುವ ತೊಂದರೆಯು ದೂರಾಗುವುದು. ಸ್ಪರ್ಧಾತ್ಮಕ ಮನೋಭಾವವು ನಿಮ್ಮ ದಾರಿಯನ್ನು ತಪ್ಪಿಸಬಹುದು. ಪಾಲುದಾರಿಕೆಯಲ್ಲಿ ಕಲಹವಾಗುವ ಸಾಧ್ಯತೆ ಇದೆ. ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ.
ಕರ್ಕಾಟಕ ರಾಶಿ: ನಿಮ್ಮ ಬಳಿ ಇರುವ ವಸ್ತುವು ಅನೇಕ ಉಪಯೋಗಕ್ಕೆ ಬರಬಹುದು. ನಿಮಗೆ ಗೊತ್ತಿರುವುದನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ವೀಕ್ಷಿಸಬಹುದು. ಇಂದು ನಿಮಗೆ ಬರಬೇಕಾದ ಹಣವು ಅನಿರೀಕ್ಷಿತ ರೀತಿಯಲ್ಲಿ ಬಂದರೂ ಅದು ಇನ್ನೊಂದು ಮಾರ್ಗದಲ್ಲಿ ಖಾಲಿಯಾಗುವುದು. ನಿಮಗೆ ಇಷ್ಟವಿಲ್ಲದವರನ್ನು ಮನಸ್ಸಿನಿಂದ ಹೊರಹಾಕಿ. ಮನೆಯ ನಿರ್ಮಾಣಕ್ಕೆ ಅಧಿಕ ಖರ್ಚು ಮಾಡಬೇಕಾಗುವುದು. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ರೀತಿಯ ಪರೀಕ್ಷೆಗಳು ಬರಬಹುದು. ಸ್ವತಂತ್ರವಾದ ಆಲೋಚನೆಯನ್ನು ಬೆಳೆಸಿಕೊಳ್ಳಿ. ಸದುದ್ದೇಶದ ಸಂಬಂಧಗಳು ನಿಮಗೆ ಯಶಸ್ಸು ಕೊಡುವುದು.
ಸಿಂಹ ರಾಶಿ: ನಿಮ್ಮ ಸಿಟ್ಟು ಹತೋಟಿ ತಪ್ಪಬಹುದು. ನಿಮಗೆ ಇಂದು ಏನಾದರೂ ಹೊಸತನ್ನು ಮಾಡುವ ಉದ್ದೇಶವಿರುವುದು. ಮೇಲಿಂದ ಮೇಲೆ ಬೀಳುವ ಘಾತದಿಂದ ಬಲವಾದ ಘಾಸಿಯಾಗಲಿದೆ. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಗಾಯದ ಮೇಲೆ ಬರೆ ಬೀಳಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ಬಂಧುಗಳ ಮಾತಿಂದ ಸಿಟ್ಟಾಗುವಿರಿ.
ಕನ್ಯಾ ರಾಶಿ: ಎಲ್ಲವೂ ನಿಮಗೆ ಸಂಕೀರ್ಣಗೊಂಡಂತೆ ಭಾಸವಾಗಬಹುದು. ಇಂದು ನೀವು ನಿಮ್ಮ ಪ್ರತಿಬಂಧವನ್ನು ಮೀರಿ ತೊಂದರೆ ಪಡುವಿರಿ. ನಿಮಗೆ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಪಾಲುದಾರಿಕೆ ಸಿಗಬಹುದು. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ.
ತುಲಾ ರಾಶಿ: ಸಂಗಾತಿಯ ಜೊತೆ ಮೋಜಿನಲ್ಲಿ ಇರುವಿರಿ. ಇಂದು ನಿಮ್ಮಲ್ಲಿ ಉತ್ಸಾಹವಿದ್ದು ನೀವೇ ಸ್ವತಃ ಜವಾಬ್ದಾರಿಯನ್ನು ಪಡೆಯುವಿರಿ. ನಿಮ್ಮದಾದ ಸಂಪತ್ತನ್ನು ಇನ್ನೊಬ್ಬರಿಗೆ ಕೊಡಬೇಕಾಗುವುದು. ಮುಖವನ್ನು ಗಂಟು ಹಾಕಿಕೊಂಡು ಇರುವುದು ನಿಮ್ಮಿಂದ ಜನರನ್ನು ದೂರವಿರಿಸುತ್ತದೆ. ನಿಮ್ಮಲ್ಲಿರುವ ಅಲ್ಪ ಸ್ವಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಹೂಡಿಕೆಯಿಂದ ಅಲ್ಪ ಹಣವನ್ನು ಕಳೆದುಕೊಳ್ಳಬೇಕಾಗುವುದು. ಇಂದಿನ ನಿಮ್ಮ ಮಾರಾಟದಿಂದ ಬೆಲೆಯು ಸಿಗದು. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು.
ವೃಶ್ಚಿಕ ರಾಶಿ: ಇಂದು ಕೆಲವರ ಅಗಲಿಕೆಯು ನಿಮ್ಮನ್ನು ಕಾಡಬಹುದು. ವ್ಯಾವಹಾರಿಕ ಸಂಬಂಧವನ್ನು ಹಾಗೆಯೇ ಇಟ್ಟುಕೊಂಡರೆ ಒಳ್ಳೆಯದು. ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಹಣ ಕೊಟ್ಟರೆ ಎಲ್ಲವೂ ಸಿಗದು. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ.
ಧನು ರಾಶಿ: ಭೇದವನ್ನು ಲೆಕ್ಕಿಸುತ್ತ ಕುಳಿತರೆ ಕೆಲಸವಾಗದು. ನಿಮ್ಮ ನಿಯೋಜಿತ ಕಾರ್ಯಗಳನ್ನು ಮಾಡಲು ಜನರು ಸಿಗದೇಹೋಗಬಹುದು. ಧಾರ್ಮಿಕ ಕಾರ್ಯಗಳಿಗೆ ಮುಂದಾಳುತ್ವವವನ್ನು ವಹಿಸುವಿರಿ. ಉದ್ವೇಗದಲ್ಲಿ ನೀವು ಏನನ್ನಾದರೂ ಹೇಳಬಹುದು. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ.
ಮಕರ ರಾಶಿ: ನಿಮಗೆ ಆಹಾರದಿಂದ ತೃಪ್ತಿ ಸಿಗದು. ನಿಮ್ಮ ಮಕ್ಕಳನ್ನು ಸರಿಯಾದ ಮಾರ್ಗಕ್ಕೆ ತರಲು ಸಮಯವು ಬೇಕಾಗುವುದು. ನಿಮಗೆ ತಿಳಿದ ವಿಚಾರದ ಬಗ್ಗೆ ಹುಡುಕಾಟ ನಡೆಸುವಿರಿ. ವಿದ್ಯಾರ್ಥಿಗಳು ಸಂಶೋಧನೆಯತ್ತ ಗಮನವನ್ನು ಕೊಡುವರು. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ಸರಿಯಾದ ಸಮಯಕ್ಕೆ ಉತ್ತಮ ವೈದ್ಯರ ಸಲಹೆಯನ್ನು ಪಡೆಯಿರಿ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ.
ಕುಂಭ ರಾಶಿ: ಎಲ್ಲವೂ ನಿಮ್ಮ ಕೈಯಲಿದೆ ಎಂದುಕೊಂಡು ಬೀಗುವುದು ಬೇಡ. ಸಾಮಾಜಿಕ ಕಾರ್ಯಗಳ ಬಗ್ಗೆ ಕಿವಿಮಾತನ್ನು ಆಪ್ತರು ಹೇಳುವರು. ಪ್ರೇಮದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ಮುಂದುವರಿಯುವುದು ಮುಖ್ಯವಾದೀತು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು.
ಮೀನ ರಾಶಿ: ಯಾವುದನ್ನೂ ಮೊದಲಿನಂತೆ ಮಾಡಲಾಗದು ಎಂಬ ಭ್ರಮೆಯ ನಿರಸನವಾಗಲಿದೆ. ನಿಮ್ಮ ಇಂದಿನ ಶ್ರಮವು ಎಷ್ಟೇ ಇದ್ದರು ಒಂದು ಮಾತು ಎಲ್ಲದಕ್ಕೂ ತಣ್ಣೀರು ಹಾಕುವುದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ.