Sat. Apr 19th, 2025

Bengaluru: ಕರ್ನಾಟಕ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು – ಬಿಜೆಪಿ ಕಾರ್ಯಕರ್ತರಿಗೆ ಬಿ.ವೈ. ವಿಜಯೇಂದ್ರ ಬಹಿರಂಗ ಪತ್ರ !!

ಬೆಂಗಳೂರು:(ನ.26) ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಇದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಲು ಕಾರಣವಾಗಿದೆ.

ಇದನ್ನೂ ಓದಿ: ⭕ಮಂಗಳೂರು: ಹಿಂದೂ ಹೆಸರಲ್ಲಿ ಯುವತಿಯೊಂದಿಗೆ ಕ್ರಿಶ್ಚಿಯನ್‌ ಯುವಕನ ಪ್ರೀತಿಯ ನಾಟಕ

ನವೆಂಬರ್ 23 ರಂದು ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ​ ಉಪ ಚುನಾವಣಾ ಫಲಿತಾಂಶ ಹೊರಬಿದ್ದಿತ್ತು. ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ ಸೋಲು ಕಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಸೋಲಿನಿಂದ ಬಿಜೆಪಿ ಕಾರ್ಯಕರ್ತರು ಎದೆಗುಂದಬೇಕಿಲ್ಲ, ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತ ಎಂದು ಭಾವಿಸೋಣ ಎಂದು ಬರೆದಿದ್ದಾರೆ.

ಆಡಳಿತ ಸಮಯದಲ್ಲಿ ದುರ್ಮಾರ್ಗ ಬಳಸಿ ಗೆಲ್ಲುವುದು ಕಾಂಗ್ರೆಸ್​ಗೆ ಹೊಸತಲ್ಲ, ಸೋಲನ್ನು ನಾವ್ಯಾರು ಕೂಡ ಹಿನ್ನಡೆ ಎಂದು ಪರಿಗಣಿಸುವ ಅಗತ್ಯವಿಲ್ಲ.

ಬಿಜೆಪಿ ಅಧಿಕಾರದ ಬೆನ್ನುಹತ್ತಿ ರಾಜಕಾರಣ ಮಾಡಲು ಜನ್ಮ ತಾಳಿದ್ದಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಚುನಾವಣೆ ಫಲಿತಾಂಶ ತಮ್ಮ ಭ್ರಷ್ಟತೆಯ ಕರಾಳ ಮುಖ ಒರೆಸಿಕೊಳ್ಳಲು ವಸ್ತ್ರವೂ ಆಗುವುದಿಲ್ಲ, ಅಸ್ತ್ರವೂ ಆಗುವುದಿಲ್ಲ ಎಂದು ಬರೆದಿದ್ದಾರೆ.

ಬಿಜೆಪಿಯಲ್ಲಿ ಅಭಿಪ್ರಾಯ ಭೇದಗಳಿಗೆ ಮುಕ್ತ ಅವಕಾಶ ಇದ್ದೇ ಇದೆ, ಪ್ರತಿ ಕಾರ್ಯಕರ್ತ, ಮುಖಂಡರು, ಹಿರಿಯರೊಂದಿಗೆ ವಿಶ್ವಾಸ ಹಾಗೂ ಪ್ರೀತಿಯನ್ನು ಗಳಿಸಿಕೊಂಡು ಪಕ್ಷ ಗಟ್ಟಿಗೊಳಿಸಬೇಕೆಂಬ ಹಂಬಲ ನನ್ನದು ಎಂದರು.

ಉಪಚುನಾವಣೆ ಫಲಿತಾಂಶ ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರುವುದಿಲ್ಲ, ಪತ್ರದಲ್ಲಿ ಯತ್ನಾಳ್ ನೇತೃತ್ವದ ಬಣದ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *