Sun. Mar 23rd, 2025

Hebri: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಹೆಬ್ರಿ:(ನ.28) ಕಬ್ಬಿನಾಲೆ ಹೊನ್ನಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಬಾರ್(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಇದನ್ನೂ ಓದಿ: ⭕ಉಡುಪಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!

ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.

ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *