Tue. Apr 8th, 2025

Ujire: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಬೆಳಾಲು ಶ್ರೀ ಧ. ಮಂ. ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ

ಉಜಿರೆ:(ನ.28) ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ,

ಇದನ್ನೂ ಓದಿ: ⭕ಬೆಳ್ತಂಗಡಿ : ವಿದ್ಯಾರ್ಥಿನಿ ಸೂಸೈಡ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!!

ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಇಂದುಮತಿ ಹಣ್ಣು, ತರಕಾರಿ,

ಧಾನ್ಯಗಳ ಸಂರಕ್ಷಣಾ ವಿಧಾನಗಳಲ್ಲಿ ಪ್ರಗತಿ ಈ ವಿಷಯದಲ್ಲಿ ರಚಿಸಿದ ಪ್ರಬಂಧಕ್ಕೆ ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಬಂದಿರುತ್ತದೆ. ಈ ಪ್ರಬಂಧವನ್ನು ನವಂಬರ್ 27 ರಂದು ಸಿ.ಎಸ್‌. ಐ.ಆರ್. ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು ಬೆಂಗಳೂರು ಇಲ್ಲಿ ನಡೆದ

ಕಣಾದ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಕಾರ್ಯಕ್ರಮದಲ್ಲಿ ಪ್ರಕಟಿಸಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿನೆಲೆ ಇವರು ಪ್ರಸಿದ್ಧ ಪ್ರೇಮಕವಿ ಡಾ. ಬಿ ಆರ್ ಲಕ್ಷ್ಮಣ ರಾವ್ ಇವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಿದರು.

Leave a Reply

Your email address will not be published. Required fields are marked *