Thu. Dec 26th, 2024

Bantwala : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ – ಅಪಾಯದಿಂದ ಪಾರಾದ ಪ್ರಯಾಣಿಕರು

ಬಂಟ್ವಾಳ:(ನ. 30) ಪಾಣೆಮಂಗಳೂರು ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು,ಕೆಲ ಹೊತ್ತುಗಳ ಕಾಲ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ.

ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ‌ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.

ಆದರೆ ಘಟನೆಯಿಂದ ಸುಮಾರು ಒಂದು ತಾಸಿಗಿಂತಲೂ ಅಧಿಕೃತವಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರು ಮತ್ತು ಲಾರಿಯನ್ನು ರಸ್ತೆಯಿಂದ ಬದಿಗೆ ಸರಿಸಿದ ಬಳಿಕ ಟ್ರಾಫಿಕ್ ಕ್ಲಿಯರ್ ಆಗಿದೆ.

ಪ್ರಥಮ ಅಪಘಾತ:

ಚತುಷ್ಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಸೇತುವೆಯ ಪಕ್ಕ ಹೊಸ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ ವಾರಗಳ ಹಿಂದೆಯಷ್ಟೇ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಹಾಗಾಗಿ ಹಳೆಯ ಸೇತುವೆಯನ್ನು ಬಂದ್ ಮಾಡಿ ಅದರ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಆರಂಭಿಸಿದ್ದಾರೆ .

ಕಾಮಗಾರಿಯ ಹಿನ್ನೆಲೆಯಲ್ಲಿ ಹೊಸ ಸೇತುವೆ ಮೂಲಕ ದ್ವಿಮುಖ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಗಾಗಿ ಇಂದು ಸಂಜೆ ವೇಳೆ ಕಾರು ಮತ್ತು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಸೇತುವೆಯ ಅಧಿಕೃತವಾಗಿ ಉದ್ಘಾಟನೆ ಯಾಗದಿದ್ದರೂ ಜನರ ಉಪಯೋಗದ ದೃಷ್ಟಿಯಿಂದ ಕಂಪೆನಿಯವರು ಸೇತುವೆಯಲ್ಲಿ ಧಾರ್ಮಿಕ ‌ವಿಧಿವಿಧಾನಗಳನ್ನು ನೆರವೇರಿಸಿ ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಸಂಚಾರ ಆರಂಭವಾಗಿ ವಾರ ಕಳೆದ ಕೂಡಲೇ ಪ್ರಥಮವಾಗಿ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *