ಬೆಳಾಲು:(ಡಿ.2) ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.
ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಇವರನ್ನು ರಕ್ಷಿಸುವ ವೇಳೆ ಜತೆಗಿದ್ದವರು ರಕ್ಷಿಸಲು ಹೋದಾಗ ಅವರು ಅಪಾಯದಲ್ಲಿದ್ದನ್ನು ಕಂಡು ಅವರನ್ನು ಮತ್ತೊಬ್ಬ ರಕ್ಷಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಪ್ರಸಾದ್ ಮುಳುಗಿದ್ದಾರೆ. ನದಿ ಪ್ರದೇಶ ಆಳವಾಗಿರುವುದರಿಂದ ಮುಳುಗು ತಜ್ಞರ ಅನಿವಾರ್ಯವಿದೆ.ಪ್ರಸಾದ್ ವಿವಾಹಿತರಾಗಿದ್ದು ಪತ್ನಿ, ಒಬ್ಬ ಪುತ್ರನಿದ್ದಾನೆ.
ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.