ಬೆಳ್ತಂಗಡಿ:(ಡಿ.2) ಭಾರತದಲ್ಲಿರುವಂತಹ ಹಿಂದೂಗಳು ಬಾಂಗ್ಲಾದ ಹಿಂದೂಗಳಿಗೆ ಶಕ್ತಿಯನ್ನು ತುಂಬುವಂತಹ ನಿಟ್ಟಿನಲ್ಲಿ, ಹಿಂದೂ ಹಿತ ರಕ್ಷಣಾ ಸಮಿತಿಯಿಂದ,
ಇದನ್ನೂ ಓದಿ: 🛑ಮಂಗಳೂರು: ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ
ಮಂಗಳೂರಿನಲ್ಲಿ ಡಿ.4 ರಂದು ಬೆಳಗ್ಗೆ 10 ಗಂಟೆಗೆ ಜ್ಯೋತಿ ಸರ್ಕಲ್ ನಿಂದ ತಾಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ ಹಾಗೂ
ಹಿಂದೂ ಹಿತ ರಕ್ಷಣಾ ಸಮಿತಿ ಕರೆ ಕೊಟ್ಟಂತಹ ಹೋರಾಟದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ ಇದೆ ಎಂದು
ಶಾಸಕ ಹರೀಶ್ ಪೂಂಜರವರು ತಿಳಿಸಿದರು.ಸುದ್ದಿ ಗೋಷ್ಠಿಯಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.
ಅವರು ಡಿ.2 ರಂದು ಬೆಳ್ತಂಗಡಿ ಪ್ರವಾಸ ಮಂದಿರದಲ್ಲಿ ಕರೆದ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು.