Thu. Dec 26th, 2024

Bengaluru: ರಾಜ್ಯದ ಜನತೆಗೆ ಮತ್ತೊಂದು ಶಾಕ್‌ – “ನಂದಿನಿ ಹಾಲಿನ ದರ” ಮತ್ತೆ 5 ರೂ.ಏರಿಕೆ ಸಾಧ್ಯತೆ.!!

ಬೆಂಗಳೂರು:(ಡಿ.2) ಅಡುಗೆ ಎಣ್ಣೆ, ಇಂಧನ, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ನಂದಿನಿ ಹಾಲಿನ ದರ ಕೂಡ ಶೀಘ್ರವೇ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 🛑ಮಂಗಳೂರು: ಫೆಂಗಲ್ ಚಂಡಮಾರುತ

ನಂದಿನಿ ಹಾಲಿನ ದರ ಏರಿಕೆ ಕುರಿತು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ, ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಸುಳಿವು ನೀಡಿದ್ದು,

ನಂದಿನಿ ಹಾಲಿನ ದರ 5 ರೂ. ಏರಿಸಿ, ಆ ಹಣವನ್ನು. ರೈತರಿಗೆ ಕೊಡಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *