ಬೆಳ್ತಂಗಡಿ,(ಡಿ.3)(ಯು ಪ್ಲಸ್ ಟಿವಿ): ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಸಮೀಪದ ನೇತ್ರಾವತಿ ನದಿಯಲ್ಲಿ ನಡೆದಿದೆ.
ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್(38 ) ನಾಪತ್ತೆಯಾದ ವ್ಯಕ್ತಿಯಾಗಿದ್ದರು.ಇವರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿತ್ತು.
ಈ ನಿಟ್ಟಿನಲ್ಲಿ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿತ್ತು.
ಇದೀಗ ಅವರ ಮೃತದೇಹ ಸಿಕ್ಕಿದ್ದು, ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.