ಕೇರಳ: (ಡಿ.3) ಕೇರಳದ ಅಲಪ್ಪುಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.
ಕಲರಕೋಡ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಐವರು ಗಾಯಗೊಂಡು ಸಾವನ್ನಪ್ಪಿದ್ದಾರೆ. ಡಿಕ್ಕಿಯ ಪರಿಣಾಮದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇದೇ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ನಂತರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.