ಪುತ್ತೂರು:(ಡಿ.4) ಪುತ್ತೂರಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 28 ವರ್ಷಗಳಿಂದ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಹೊನ್ನಪ್ಪ ಸಿ.ಎಚ್. ಅವರು ನ.30ರಂದು ತಮ್ಮ ವೃತ್ತಿ ಜೀವನದಿಂದ ನಿವೃತ್ತಿ ಹೊಂದಿದರು.
ಇದನ್ನೂ ಓದಿ: Daily Horoscope: ಅಪರಿಚಿತರೊಂದಿಗೆ ಕುಂಭ ರಾಶಿಯವರು ಸಲುಗೆಯಿಂದ ಇರುವರು!!!
ವೈಧ್ಯಾಧಿಕಾರಿಗಳು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರೊಂದಿಗೆ ಉತ್ತಮ ರೀತಿಯಲ್ಲಿ ಒಡನಾಟ ಇಟ್ಟುಕೊಂಡಿದ್ದ ಅವರು, ಸರ್ಕಾರಿ ನೌಕರರಾಗಿ ನಿಷ್ಠೆ, ಜವಾಬ್ದಾರಿಯುತವಾಗಿ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ.
ಸಾರ್ವಜನಿಕ ಜೀವನದಲ್ಲೂ ಎಲ್ಲರ ಪ್ರೀತಿ ಪಾತ್ರರಾಗಿದ್ದರು. ಚಿಕ್ಕಪುತ್ತೂರಿನ ಸಿ.ಬಾಬು ಹಾಗೂ ಚಿನ್ನು ದಂಪತಿಯ ಮೂರನೇ ಪುತ್ರನಾದ ಹೊನ್ನಪ್ಪ ಸಿ.ಎಚ್. ಅವರು ಇದೀಗ ನಿವೃತ್ತಿ ಹೊಂದುತ್ತಿದ್ದು,
ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಆಡಳಿತ ವರ್ಗ ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ. ಈ ವೇಳೆ ಆಡಳಿತ ವೈಧ್ಯಾಧಿಕಾರಿ ಡಾ. ಆಶಾಜ್ಯೋತಿ ಕೆ., ಸಹಾಯಕ ಆಡಳಿತಾಧಿಕಾರಿ ಯೋಗಾನಂದ, ಡಾ. ಪ್ರಶಾಂತ್. ಡಾ.ಜಯ ಕುಮಾರಿ, ಡಾ.ಯದುರಾಜ್, ಡಾ.ಝೈನಾಬ, ಮತ್ತಿತರರು ಉಪಸ್ಥಿತರಿದ್ದರು.