ಉಜಿರೆ:(ಡಿ.4) ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವು ಅನುಗ್ರಹ ಸಭಾಭವನದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ !ಫಾ! ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ದಿನಾಂಕ 3.12.2024ರ ಶನಿವಾರ ಪೂರ್ವಾಹ್ನ ಗಂಟೆ 9.30ಕ್ಕೆ ಪ್ರಾರಂಭಗೊಂಡಿತು.
ಇದನ್ನೂ ಓದಿ: Mangaluru: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಆಗಮಿಸಿರುವ ಅಭ್ಯಾಗತರನ್ನು ಶಾಲಾ ಬ್ಯಾಂಡಿನ ಮೂಲಕ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಶಾಲಾ ಮಕ್ಕಳ ಪ್ರಾರ್ಥನೆಯ ಬಳಿಕ ಶಾಲಾ ನಾಯಕಿ ಗಾಯನ ಇವರು ಸ್ವಾಗತ ಭಾಷಣದ ಮೂಲಕ ಎಲ್ಲರನ್ನು ಸ್ವಾಗತಿಸಿದರು.
ಶಾಲಾ ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೊ ಅವರು ಶಾಲಾ ವರದಿಯನ್ನು ವಾಚಿಸಿದರು. ಆಯ್ದ ಬಹುಮಾನಗಳ ವಿತರಣೆಯನ್ನು ಮುಖ್ಯ ಅತಿಥಿಯಾದ ಡಾ. ಶಾಲ್ಮಲಿ ಸುನಿಲ್ ಅವರು ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದಲ್ಲಿ ಆಡಿದ ಮಕ್ಕಳನ್ನು ಗೌರವಿಸಲಾಯಿತು. ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿಯಾದ ಸತ್ಯಾರ್ಥ ಜೈನ್ ಇವರನ್ನು ವಿಶೇಷವಾಗಿ ಗೌರವಿಸಲಾಯಿತು. ಇನ್ನೋರ್ವ ಮುಖ್ಯ ಅತಿಥಿ ನಮ್ಮ ಹಳೆಯ ಶಾಲೆ ವಿದ್ಯಾರ್ಥಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೊಪತಿ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಶಾಲ್ಮಲಿ ಸುನಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅನುಗ್ರಹ ಶಿಕ್ಷಣ ಸಂಸ್ಥೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡುತ್ತಾ ಜೀವನದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಸಂಚಾಲಕರಾದ ವಂ! ಫಾ!ಅಬೆಲ್ ಲೋಬೊ ಅವರು ಅನುಗ್ರಹ ಸಂಸ್ಥೆಯ ಎಲ್ಲಾ ಶೈಕ್ಷಣಿಕ ಕ್ರಿಯಾಚಟುವಟಿಕೆಗಳಿಗೆ ಸಂತಸ ವ್ಯಕ್ತಪಡಿಸಿ ಇಲ್ಲಿಯ ಕಾರ್ಯಯೋಜನೆಗಳು ಇತರ ಶಾಲೆಗಳಿಗೂ ಮಾದರಿಯಾಗಲೆಂದು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಕೋರಿದರು.
ವೇದಿಕೆಯಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಶ್ರೀ ಆಂಟನಿ ಫೆರ್ನಾಂಡಿಸ್, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಉಮೇಶ್ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ಶ್ರೀಮತಿ ವಿನಯಲತಾ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿ ನಾಯಕ ಜೆರಿನ್ ಸಾಬಾಸ್ಟಿಯನ್ ಧನ್ಯವಾದವನ್ನು ಅರ್ಪಿಸಿದರು. ಅಪರಾಹ್ನ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.