Mon. Apr 7th, 2025

Kadaba: ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣ – ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆಯೆಂದು BJP ನಾಯಕರ ಆರೋಪ – ಈ ಬಗ್ಗೆ ಕಾಂಗ್ರೆಸ್‌ ಹೇಳಿದ್ದೇನು?!

ಕಡಬ:(ಡಿ.5) ಬಿಳಿನೆಲೆಯ ಸಂದೀಪ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರು ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿಯವರು ಆರೋಪವನ್ನು ಸಾಬೀತು ಮಾಡಬೇಕು, ಇಲ್ಲವೇ ಕಾರಣಿಕ ಕ್ಷೇತ್ರ ಮಜ್ಜಾರು ಕ್ಷೇತ್ರಕ್ಕೆ ಬಂದು ಹೇಳಬೇಕು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ: ಬಸ್ ನಿಲ್ದಾಣದಲ್ಲಿ ಅಕ್ರಮ ಚಟುವಟಿಕೆ ಆರೋಪ

ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅವರು ಕಾಂಗ್ರೆಸ್ ಮೇಲೆ ಆರೋಪ ಮಾಡುವವರು ಮಜ್ಜಾರು ಕ್ಷೇತ್ರಕ್ಕೆ ಬಂದು ದೈವ ಸನ್ನಿಧಿಯಲ್ಲಿ ಹೇಳಬೇಕು, ವಿನಾಕಾರಣ ನನ್ನನ್ನು ಗುರಿಯಾಗಿಟ್ಟುಕೊಡು ಹೇಳಿಕೆ ನೀಡಿದವರ ವಿರುದ್ಧ ನಾನು ಅಲ್ಲಿ ಪ್ರಾರ್ಥನೆ ಮಾಡುತ್ತೇನೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಪ್ರಾರ್ಥನೆ ಸಲ್ಲಿಸುತ್ತೇನೆ, ಮತ್ತೊಂದೆಡೆ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದರು. ಕೊಲೆ ಪ್ರಕರಣದಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎನ್ನುವ ಆರೋಪ ಮಾಡಿದ್ದಾರೆ.

ಇರಬಹುದು ನಾವು ಆ ವಿಚಾರದಲ್ಲಿ ಸಹಮತ ನೀಡಿ ಸಮಗ್ರ ತನಿಖೆಗೆ ಅಗ್ರಹಿಸುತ್ತಿದ್ದೇವೆ. ಆರೋಪಿಗೆ ಕಾಂಗ್ರೆಸ್ ಮುಖಂಡರೊಬ್ಬರು ಬೆಂಬಲ ನೀಡುತ್ತಿದ್ದಾರೆ ಎಂದು ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಮುಖಂಡರನ್ನು ಬಂಧಿಸಬೇಕು ಎಂದು ಆಗ್ರಹಿಸಿದ ಸುಧೀರ್ ಶೆಟ್ಟಿ ಹತ್ಯೆಗೆ ಪೂರಕವಾದ ಕೆಲಸ ಮಾಡಿದವರನ್ನು ಕೂಡಾ ಬಂಧಿಸಬೇಕು ಎಂದರು.

Leave a Reply

Your email address will not be published. Required fields are marked *