ಕದ್ರಿ:(ಡಿ.5) ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಚಿನ್ನಾಭರಣ ಪಡೆದು ವಾಪಸ್ ಕೊಡದೆ ಸತಾಯಿಸಿದ ಸ್ನೇಹಿತ
ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯ 2021ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಇತ್ತೀಚೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ದೇವಳದ ಕಾರ್ಯ ನಿರ್ವಹಣಾಧಿಕಾರಿಯವರು ತಿಳಿಸಿದ್ದಾರೆ.