ಪುತ್ತೂರು:(ಡಿ.5) ಶಾಂತಿಗೋಡು ಗ್ರಾಮದ ಯುವಕನೊಬ್ಬ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಜಾತಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಂಗಳೂರು : ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆ
ಶಾಂತಿಗೋಡು ಗ್ರಾಮದ ರೋಶನ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ.
ತನಗೆ ಲೈಂಗಿಕ ದೌರ್ಜನ್ಯವೆಸಗಿ ಜಾತಿನಿಂದನೆ ಮಾಡಿದ್ದಾನೆಂದು ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿ ರೋಶನ್ ವಿರುದ್ಧ ಪೋಕ್ಸೋ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.
ಡಿ.3ರಂದು ರಾತ್ರಿ ಆರೋಪಿ ರೋಶನ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿದ್ದಾರೆ. ಆರೋಪಿ ರೋಶನ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.