Allu Arjun: ಡಿಸೆಂಬರ್ 4 ರಂದು ಹೈದರಾಬಾದ್‌ನಲ್ಲಿ ಪುಷ್ಪ 2 ಸಿನಿಮಾ ಪ್ರಥಮ ಪ್ರದರ್ಶನಗೊಂಡಿತು. ಈ ವೇಳೆ ಸಂಧ್ಯಾ ಚಿತ್ರಮಂದಿರದ ಹೊರಗೆ ಜನ ಜಮಾಯಿಸಿ ನೂಕುನುಗ್ಗಲು ಉಂಟಾಯಿತು. ಈ ಕಾಲ್ತುಳಿತದಲ್ಲಿ 39 ವರ್ಷದ ಮಹಿಳೆ ರೇವತಿ ಪ್ರಜ್ಞಾಹೀನಳಾಗಿ ಸಾವನ್ನಪ್ಪಿದ್ದಾಳೆ. ಮಹಿಳೆಯ ಇಬ್ಬರು ಮಕ್ಕಳೂ ಗಾಯಗೊಂಡಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಪುಷ್ಪಾ 2: ರೂಲ್ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ದೆಹಲಿ: ತ್ರಿಬಲ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್
ಪುಷ್ಪ 2 ದಿ ರೂಲ್‌ನ ಪ್ರಥಮ ಪ್ರದರ್ಶನದ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅವರೊಂದಿಗೆ ಹೆಚ್ಚಿನ ಸಂಖ್ಯೆಯ ಜನರು ಥಿಯೇಟರ್‌ಗೆ ಪ್ರವೇಶಿಸಲು ಪ್ರಯತ್ನ ಮಾಡಿದ್ದು, ಇದರಿಂದಾಗಿ ಕಾಲ್ತುಳಿತ, ಲಾಠಿ ಚಾರ್ಜ್ ನಡೆದ ದೃಶ್ಯ ಕಂಡುಬಂತು. ಮೃತ ಮಹಿಳೆ ತನ್ನ ಇಬ್ಬರು ಮಕ್ಕಳು ಮತ್ತು ಪತಿಯೊಂದಿಗೆ ಸಂಧ್ಯಾ ಚಿತ್ರಮಂದಿರಕ್ಕೆ ಚಿತ್ರದ ಪ್ರಥಮ ಪ್ರದರ್ಶನದ ನಿಮಿತ್ತ ಆಗಮಿಸಿದ್ದರು. ಭಾರೀ ಜನಸಾಗರದ ನಡುವೆ ಉಸಿರುಗಟ್ಟಿ ಮಹಿಳೆ ಸಾವನ್ನಪ್ಪಿದ್ದಾಳೆ.
ಅಲ್ಲು ಅರ್ಜುನ್ ಅವರ ಭದ್ರತಾ ತಂಡ ಮತ್ತು ಸಂಧ್ಯಾ ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಮಹಿಳೆಯ ಕುಟುಂಬದವರು ಅಲ್ಲು ಅರ್ಜುನ್ ವಿರುದ್ಧ ಈ ಪ್ರಕರಣ ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀಮಿಯರ್‌ಗೆ ಅಲ್ಲು ಅರ್ಜುನ್ ಆಗಮಿಸುವ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಿಲ್ಲ ಮತ್ತು ಪ್ರೇಕ್ಷಕರನ್ನು ನಿಯಂತ್ರಿಸಲು ವ್ಯವಸ್ಥೆ ಮಾಡಿಲ್ಲ ಎಂದು ಚಿತ್ರಮಂದಿರದ ಆಡಳಿತ ಮಂಡಳಿ ಆರೋಪಿಸಿದೆ. ಅಲ್ಲು ಅರ್ಜುನ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ ಜನರೊಂದಿಗೆ ಜಗಳವಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಇದರಿಂದ ವಾತಾವರಣ ಹದಗೆಟ್ಟಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ.