Wed. Apr 16th, 2025

Belthangady: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವರ ಪುನರ್‌ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ:(ಡಿ.7) ಶ್ರೀ ಸಿದ್ಧಿವಿನಾಯಕ ದೇವರ ಪುನರ್‌ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವವು ಜನವರಿ 07 ರಿಂದ 12 ರವರೆಗೆ ನಡೆಯಲಿದೆ.

ಇದನ್ನೂ ಓದಿ : ಚಿಕ್ಕಮಗಳೂರು: ವಿ ಎಚ್ ಪಿ ನೇತೃತ್ವದಲ್ಲಿ ನಡೆಯಲಿರುವ ದತ್ತ ಜಯಂತಿ ಆಚರಣೆಯ ಪ್ರಯುಕ್ತ ನಾಲ್ಕು ದಿನ ಪ್ರವಾಸಿಗರಿಗೆ ನಿಷೇಧ..!!!

ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ। ಡಿ. ವೀರೇಂದ್ರ ಹೆಗ್ಗಡೆಯವರ ಅಮೃತಹಸ್ತದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜೆಗುತ್ತು ಕೊಯ್ಯೂರು, ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಮಹಾಬಲ ಗೌಡ , ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪಗೌಡ,

ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಆಡಳಿತ ಮಂಡಳಿ ಕಾರ್ಯದರ್ಶಿಯಾದ ಉಮೇಶ್ ಗೌಡ ಅಂಗಡಿ ಮಜಲು, ಬ್ರಹ್ಮಕಲಶೋತ್ಸವ ಸಮಿತಿ
ಕೋಶಾಧಿಕಾರಿಯಾದ ಕೇಶವ್ ಗೌಡ ಕೋಂಗುಜೆ, ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು, ಶ್ರೀ. ಸಿ.ವಿ. ಭಜನಾ ಮಂಡಳಿಯ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *