Fri. Dec 27th, 2024

Mangaluru: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಹಾಡಿದ ತುಳು ಹಾಡಿಗೆ ಕರಾವಳಿ ಜನರು ಫುಲ್‌ ಫಿದಾ!!

ಮಂಗಳೂರು:(ಡಿ.7) ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಎಂ.ಪಿ. ಅವರು ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ಜನರ ಮನ ಗೆದ್ದಿದ್ದಾರೆ.

ಇದನ್ನೂ ಓದಿ: ಉಜಿರೆ: ಜ.1 ರಿಂದ ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಚಿಕಿತ್ಸೆ

ಗುರುವಾರ ಸಂಜೆ ನಗರದ ಕಮಿಷನರ್‌ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಪೊಲೀಸ್‌ ಹಾಗೂ ಮಂಗಳೂರು ಕಮಿಷನರೇಟ್‌ ಘಟಕದ ವತಿಯಿಂದ ಆಯೋಜಿಸಿದ್ದ ಸ್ನೇಹ ಸೌಹಾರ್ದ ಸಮ್ಮಿಲನದಲ್ಲಿ ಜಿಲ್ಲಾಧಿಕಾರಿ ಹಾಡಿದ ಹಾಡು ವೈರಲ್‌ ಆಗಿದ್ದು, ಕರಾವಳಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಮೂಲತಃ ತಮಿಳುನಾಡಿನವರಾಗಿರುವ ಜಿಲ್ಲಾಧಿಕಾರಿಯವರು ಮಂಗಳೂರಿನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ತುಳು ಸಂಪ್ರದಾಯ, ಆಚಾರ ವಿಚಾರಗಳ ಬಗ್ಗೆ ಅರಿತುಕೊಂಡಿರುವ ಅವರು ತುಳುನಾಡಿನ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ.

ಇದೀಗ ಅವರು ಹಾಡಿದ ಹಾಡಿಗೆ ಕರಾವಳಿ ಜನ ಫಿದಾ ಆಗಿದ್ದಾರೆ. ಜಿಲ್ಲಾಧಿಕಾರಿಗಳು ಕಳೆದ ಲೋಕಸಭೆ ಚುನಾವಣೆ ವೇಳೆ ತುಳು ಭಾಷೆಯಲ್ಲೇ ಮತದಾನ ಜಾಗೃತಿ ಮಾಡಿದ್ದರು.

Leave a Reply

Your email address will not be published. Required fields are marked *