ಉಜಿರೆ:(ಡಿ.9) “ಮಕ್ಕಳ ಬಾಲ್ಯದಲ್ಲಿಯೇ ಸಣ್ಣ ವಯಸ್ಸಿನಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಸ್ತನ್ನು ಮೂಡಿಸಿಕೊಳ್ಳಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ರೇಂಜರ್ ಲೀಡರ್ ಆಗಿರುವ ಶ್ರೀಮತಿ ಅಂಕಿತ ಹೇಳಿದರು.
ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ 3 ರಿಂದ 6 ವರ್ಷದ ವಿದ್ಯಾರ್ಥಿಗಳ ‘ಬನ್ನಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇನ್ನೋರ್ವ ಅತಿಥಿಗಳಾಗಿ ಬೆಳ್ತಂಗಡಿಯ ಸ್ಥಳೀಯ ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ವಿದ್ಯಾರ್ಥಿಗಳನ್ನುದ್ದೇಶಿಸಿ ಹಿತನುಡಿಗಳನ್ನಾಡಿ ಅಭಿನಯ ಗೀತೆ ಕಲಿಸಿದರು.
ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶಿಕ್ಷಕಿ ರವೀನ ಹಾಗೂ ಮಮತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸುವಿನ ವಂದಿಸಿದರು.