ವಿಟ್ಲ:(ಡಿ.9) ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಹಗ್ಗ ಸುತ್ತಿ ಬಾಲಕಿಯೋರ್ವಳು ಸಾವು ಕಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.
ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿ ಆಟದಿಂದ ಸಾವಿಗೀಡಾದ ಬಾಲಕಿ.
ಮೂರನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಶೇರಾ ಶಾಲೆಯಲ್ಲಿ ಕಲಿಯುತ್ತಿದ್ದಳು. ಆಟವಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಈ ಘಟನೆ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ವಿಟ್ಲ ಪೊಲೀಸರು ಬಾಲಕಿಯ ಪೋಷಕರಲ್ಲಿ ಮತ್ತು ಸ್ನೇಹಿತರಲ್ಲಿ ಮಾಹಿತಿ ಸಂಗ್ರಹಿಸಿ ವಿಚಾರಣೆ ನಡೆಸುತ್ತಿದ್ದಾರೆ.