ಬೆಳ್ತಂಗಡಿ: (ಡಿ.10) ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.
ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ.
ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.
ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.