Fri. Dec 27th, 2024

SM Krishna: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ನಿಧನ – (ಡಿ.11) ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

SM Krishna:(ಡಿ.10) ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್.10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.

ಇದನ್ನೂ ಓದಿ: ಉಜಿರೆ:(ಡಿ.13-ಡಿ.14) ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಉಜಿರೆ ಎಸ್‌ಡಿಎಂ ಮನೋವಿಜ್ಞಾನ ಅಧ್ಯಯನ, ಸಂಶೋಧನಾ ವಿಭಾಗ

ಎಸ್‌ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *