ಉಜಿರೆ:(ಡಿ.10) ಯಕ್ಷ ಧ್ರುವ ಪಟ್ಲ ಫೌಂಡೇಶನ್ (ರಿ.) ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಇದೇ ಬರುವ ಡಿಸೆಂಬರ್. 14 ರಂದು ಯಕ್ಷ ಸಂಭ್ರಮ -2024 ಗುರುವಾಯನಕೆರೆಯ ನವಶಕ್ತಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಇದರ ಮಾಲಕ ಮತ್ತು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿರುವ ಮೋಹನ್ ಕುಮಾರ್ ಇವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ಪ್ರಮುಖರು ಉಪಸ್ಥಿತರಿದ್ದರು.