Fri. Dec 27th, 2024

Koyyur: ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ – ಆರೋಪಿ ಅಂದರ್!!

ಕೊಯ್ಯೂರು:(ಡಿ.11) ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಕಸಿದುಕೊಂಡು ಹೋಗಿದ್ದ ಚಿನ್ನದ ಕರಿಮಣಿ ಸರವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ರವರಿಗೆ ಮನವಿ


ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ, ಡೆಂಬುಗ ನಿವಾಸಿ ಉಮೇಶ್ ಗೌಡ(38) ಎಂಬಾತನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡದ ಸಿಬ್ಬಂದಿಗಳು ಕೊಯ್ಯೂರು ಗ್ರಾಮದ ಆದೂರ್‌ ಪೆರಲ್ ಬಸ್ ನಿಲ್ದಾಣದಲ್ಲಿ ಡಿ.10 ರಂದು ಬೆಳಗ್ಗೆ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆಯ ವಿವರ:
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ

ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಉಮೇಶ್ ಗೌಡ ಎಂಬಾತ ಹಿಂದಿನಿಂದ ಓಡಿ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು,

ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ಎದೆಗೆ ಗಾಯವಾಗಿದ್ದು, ಕರಿಮಣಿ ಎರಡು ತುಂಡಾಗಿದ್ದು, ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಸುಲಿಗೆ ಮಾಡಿಕೊಂಡು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ. ಗಾಯಗೊಂಡ ರಾಜೀವಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು,

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಸುಲಿಗೆ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು.


ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ಪಿಎಸ್‌ಐ ಮುರಳೀಧರ್ ನಾಯ್ಕ ಮತ್ತು ಇತರ ಸಿಬ್ಬಂದಿಗಳು ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *