Thu. Dec 26th, 2024

Murudeshwara: ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆ – ಶಾಲಾ ಶಿಕ್ಷಕರು ಅಮಾನತು!

Murudeshwara:(ಡಿ.11) ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಕೋಲಾರ ಶಾಲೆಯ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿನಿನ್ನೆ ಘೋರ ದುರಂತ ಒಂದು ಸಂಭವಿಸಿದ್ದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಇದೀಗ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತ ದೇಹವನ್ನು ಹೊರತೆಗೆದಿದ್ದಾರೆ.

ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕರಾಗಿರುವ ಕಾಂತರಾಜು ಅವರು ವಸತಿ ಶಾಲೆಯ ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ವಜಾ ಗೊಳಿಸಿ ಆದೇಶ ಹೊರಡಿಸಿದ್ದಾರೆ. ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿ ಕೆಲಸದಿಂದ ವಜಾ ಗೊಳಿಸಲಾಗಿದ್ದು,

ನಿರ್ಲಕ್ಷ್ಯತನ ಹಾಗೂ ಬೇಜಾಬ್ದಾರಿತನದ ಆರೋಪದ ಹಿನ್ನೆಲೆಯಲ್ಲಿ ಈ ಒಂದು ಕ್ರಮ ಕೈಗೊಳ್ಳಲಾಗಿದೆ. ಅಮಾನತು ಮಾಡಿ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ ಕಾಂತರಾಜು ಅವರು ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ನೌಕರರ ವಿರುದ್ಧ ಈ ಒಂದು ಕ್ರಮ ಕೈಗೊಂಡಿದ್ದಾರೆ.

ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *