ಬೆಳ್ತಂಗಡಿ:(ಡಿ.12) ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ-1 ಯಲ್ಲಿ ಡಿ. 14 ರಂದು ಶಾಲಾ ವಾರ್ಷಿಕೋತ್ಸವವು ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಈ ನಿಟ್ಟಿನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ, ಸಭಾ ಕಾರ್ಯಕ್ರಮ ನಡೆಯಲಿದೆ.


ಇದನ್ನೂ ಓದಿ: ಉಜಿರೆ:(ಡಿ.30 – ಜ.28) ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ಉಚಿತ ತರಬೇತಿ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕನ್ಯಾಡಿ-1 ಮತ್ತು ಕೇಲ್ತಾಜೆ ಅಂಗನವಾಡಿ ಮಕ್ಕಳಿಂದ ಚಿಣ್ಣರ ಚಿಲಿಪಿಲಿ, ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಾಂಸ್ಕೃತಿಕ ವೈಭವ, ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮ,
ಶಾಲಾ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಶ್ರೀ ಗುಣಪಾಲ ಎಂ.ಎಸ್ ಉಜಿರೆ ಇವರ ಸಾರಥ್ಯದಲ್ಲಿ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಇವರಿಂದ ಮಾಯೊದ ತುಡರ್ ಎಂಬ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.



