Sat. Mar 15th, 2025

Ullala: ಸಮುದ್ರಕ್ಕೆ ಹಾರಿ ಪಡೀಲು ನಿವಾಸಿ ಉದಯ್‌ ಕುಮಾರ್‌ ಆತ್ಮಹತ್ಯೆ!!

ಉಳ್ಳಾಲ:(ಡಿ.12) ವ್ಯಕ್ತಿಯೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ಪ್ರೀತಿ ನಿರಾಕರಿಸಿದ್ದಕ್ಕೆ 17ರ ಬಾಲಕಿಗೆ ಬೆಂಕಿ ಹಚ್ಚಿದ ಪಾಗಲ್‌ ಪ್ರೇಮಿ..!

ಮೃತ ವ್ಯಕ್ತಿಯನ್ನು ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್‌ ಕುಮಾರ್‌ (46) ಎಂದು ಗುರುತಿಸಲಾಗಿದೆ. ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ದ್ವಿಚಕ್ರ ವಾಹನ ಸಹಿತ ತನ್ನಲ್ಲಿದ್ದ

ಸೊತ್ತುಗಳನ್ನು ತೆಗೆದಿರಿಸಿ ನೀರಿಗೆ ಹಾರಿದ್ದಾರೆ. ಸಮುದ್ರ ತೀರದಲ್ಲಿದ್ದ ಯುವಕನೋರ್ವ ಈ ವಸ್ತುಗಳನ್ನು ಕಂಡು ಸಮೀಪದ ಅಂಗಡಿಯವರಿಗೆ ನೀಡಿದ್ದು, ಅವರು ಉಳ್ಳಾಲ ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸಹಿತ ಸ್ಥಳೀಯ ಈಜುಗಾರರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಉಳ್ಳಾಲದ ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಸಮುದ್ರಕ್ಕೆ ಹಾರಿದ ಅವರ ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *